Tuesday, March 28, 2023

Latest Posts

ಮಾರ್ಚ್ 4ರಂದು ರಾಜ್ಯಕ್ಕೆ ದೆಹಲಿ ಸಿಎಂ ಕೇಜ್ರಿವಾಲ್ ಭೇಟಿ: ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿಗಳು ನಡೆಯುತ್ತಿದ್ದು, ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ.
ಈಗಾಗಲೇ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಭರ್ಜರಿ ಮತಬೇಟೆಗಿಳಿದಿವೆ.ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್​ ಶಾ ಮೇಲಿಂದ ಮೇಲೆ ಭೇಟಿ ನೀಡುತ್ತಿದ್ದಾರೆ.
ಇದರ ನಡುವೆ ಇದೀಗ ಆಮ್ ಆದ್ಮಿ ಕೂಡ ತನ್ನ ಮತದಾರರನ್ನು ಸೆಳೆಯಲು ಕಸರತ್ತು ಮಾಡುತ್ತಿದೆ. ಮಾರ್ಚ್ 4ರಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ (Arvind Kejriwal) ದಾವಣಗೆರೆಗೆ ಭೇಟಿ ನೀಡಲಿದ್ದಾರೆ.
ಆದ್ಮಿ ಪಾರ್ಟಿಯಿಂದ ಆಯೋಜಿಸಲಿರುವ ಬೃಹತ್ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಕೇಜ್ರಿವಾಲ್ ಭಾಷಣ ಮಾಡಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!