Saturday, April 1, 2023

Latest Posts

ಮಾರ್ಚ್ 4 ರವರೆಗೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಿಬಿಐ ಕಸ್ಟಡಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಭಾನುವಾರ ಬಂಧನವಾಗಿದ್ದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರನ್ನು ಇಂದು (ಸೋಮವಾರ) ಸಂಜೆ ರೌಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಸಿಸೋಡಿಯಾ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡುವಂತೆ ಸಿಬಿಐ ಕೋರಿದ್ದು, ಇದಕ್ಕೆ ಒಪ್ಪಿದ ಸಿಬಿಐ ಸಿಬಿಐ ನ್ಯಾಯಾಲಯ ಮಾರ್ಚ್ 4ರವರೆಗೆ ದೆಹಲಿ ಡಿಸಿಎಂನ್ನು ಕಸ್ಟಡಿಯಲ್ಲಿರಿಸುವಂತೆ ಆದೇಶಿಸಿದೆ.

ಸಿಸೋಡಿಯಾ ಬಂಧನ ಖಂಡಿಸಿ ಎಎಪಿದೇಶಾದ್ಯಂತ ಹಲವಾರು ರಾಜ್ಯಗಳಲ್ಲಿ ಪ್ರತಿಭಟನೆಗಳನ್ನು ಆಯೋಜಿಸಿದ್ದು ಪ್ರತಿಭಟನೆ ನಡೆಸುತ್ತಿದ್ದ ಹಲವು ಆಪ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!