ದೆಹಲಿ-ದುಬೈ ಇಂಡಿಗೋ ವಿಮಾನ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ದುಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಇಂಡಿಗೋ ಫ್ಲೈಟ್ 6E 23 ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಬೆಳಿಗ್ಗೆ 8.41 ಕ್ಕೆ ಹೊರಟಿತ್ತು ಮತ್ತು 11 ಗಂಟೆಗೆ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲು ನಿರ್ಧರಿಸಲಾಗಿತ್ತು.

ಆದರೆ ಪ್ರಯಾಣಿಕರೊಬ್ಬರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ವೈದ್ಯಕೀಯ ತುರ್ತುಸ್ಥಿತಿಯ ಕಾರಣ ವಿಮಾನವನ್ನು ಕರಾಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು.

ನೈಜೀರಿಯಾದ ಪ್ರಯಾಣಿಕ ಅಬ್ದುಲ್ಲಾ (60) ಕರಾಚಿಯಲ್ಲಿ ವಿಮಾನ ಇಳಿಯುವ ವೇಳೆ ಸಾವನ್ನಪ್ಪಿದ್ದಾನೆ ಎಂದು ಪ್ರಾಥಮಿಕ ವರದಿ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!