ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿರುವ ಎಎಪಿ ಸಂಸದ ಸಂಜಯ್ ಸಿಂಗ್ ವಿರುದ್ಧ ಜಾರಿ ನಿರ್ದೇಶನಾಲಯ ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್ಎ) ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಸ್ಥಳೀಯ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಈ ಪ್ರಕರಣಕ್ಕೆ ಪೂರಕವಾದ ಚಾರ್ಜ್ ಶೀಟ್ ಇದಾಗಿದ್ದು, ತನಿಖಾ ಸಂಸ್ಥೆ ಈ ಹಿಂದೆ ಇಂತಹ ಐದು ಚಾರ್ಜ್ ಶೀಟ್ ಗಳ ಸಲ್ಲಿಸಿದೆ.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅಕ್ಟೋಬರ್ 4 ರಂದು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸ ದ್ದು, ಸತತ 11 ಗಂಟೆಗಳ ವಿಚಾರಣೆ ಬಳಿಕ ಅವರನ್ನು ಬಂಧಿಸಿತ್ತು. ಆರೋಪಿ ಉದ್ಯಮಿ ದಿನೇಶ್ ಅರೋರಾ ಅವರು ಎಎಪಿ ರಾಜ್ಯಸಭಾ ಸಂಸದ ಸಿಂಗ್ ಅವರಿಗೆ ಅವರ ನಿವಾಸದಲ್ಲಿ ಎರಡು ಹಂತಗಳಲ್ಲಿ 2 ಕೋ. ರೂ. ನಗದು ನೀಡಿದ್ದಾರೆ ಎಂದು ಇಡಿ ಆರೋಪಿಸಿದೆ. ಸಿಂಗ್ ಈ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ.