ಹೊಸದಿಗಂತ ಡಿಜಿಟಲ್ ಡೆಸ್ಕ್ :
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಜಾರಿ ನಿರ್ದೇಶನಾಲಯ (ಇಡಿ) ಡಿಸೆಂಬರ್ 12ರಂದು ಹೈದರಾಬಾದ್‌ನಲ್ಲಿ ಕೆ. ಕವಿತಾರನ್ನು 7 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ಈಗ ಪುನಃ ಮಾರ್ಚ್ 9ರ ಗುರುವಾರ ದೆಹಲಿಗೆ ವಿಚಾರಣೆಗೆ ಬರುವಂಗೆ ಸಮನ್ಸ್ ನೀಡಿದೆ.