ದೆಹಲಿಯ ಅಬಕಾರಿ ನೀತಿ ಪ್ರಕರಣ: ಕೆ.ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆ.ಕವಿತಾ(K Kavitha) ರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದೆ.

ದೆಹಲಿ ಮದ್ಯದ ಅಬಕಾರಿ ನೀತಿ 2021-22ಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಆರನೇ ಪೂರಕ ಆರೋಪಪಟ್ಟಿಯನ್ನು ಪರಿಗಣಿಸಿ ವಾದಗಳನ್ನು ಆಲಿಸುವುದನ್ನು ರೂಸ್ ಅವೆನ್ಯೂ ನ್ಯಾಯಾಲಯವು ಮೇ 20ಕ್ಕೆ ಮುಂದೂಡಿದೆ.

ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ತೆಲಂಗಾಣ ಎಂಎಲ್‌ಸಿಯ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಸದ್ಯ ರದ್ದಾಗಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ 46 ವರ್ಷದ ಬಿಆರ್‌ಎಸ್ ನಾಯಕಿ ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಇ.ಡಿ ಅಧಿಕಾರಿಗಳು ಬಂಧಿಸಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!