ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ಎಂಎಲ್‌ಸಿ ಕೆ. ಕವಿತಾಗೆ ಸುಪ್ರೀಂಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ್ ಅವರ ಪುತ್ರಿ ಕೆ.ಕವಿತಾ ಮಾರ್ಚ್ 15ರಿಂದ ಬಂಧನದಲ್ಲಿದ್ದರು. ವಿಚಾರಣೆಯ ವೇಳೆ, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ಸುಪ್ರೀಂಕೋರ್ಟ್ ಪೀಠವು, ದೆಹಲಿಯ ಅಬಕಾರಿ ನೀತಿ ಹಗರಣದಲ್ಲಿ ಕೆ ಕವಿತಾ ಭಾಗಿಯಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಯಾವ ಸಾಕ್ಷ್ಯ ಇದೆ ಎಂಬುದನ್ನು ತೋರಿಸಲು ಜಾರಿ ನಿರ್ದೇಶನಾಲಯ ಮತ್ತು ಸಿಬಿಐಗೆ ಕೇಳಿದೆ.
ಕವಿತಾ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಜಾಮೀನು ಕೋರಿದ್ದು, ಆಕೆಯ ವಿರುದ್ಧದ ತನಿಖೆಯನ್ನು ಎರಡು ಸಂಸ್ಥೆಗಳು ಪೂರ್ಣಗೊಳಿಸಿವೆ ಎಂದು ಹೇಳಿದರು. ಸಹ ಆರೋಪಿಯಾಗಿರುವ ಆಪ್ ನಾಯಕ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ನೀಡಿರುವ ಸುಪ್ರೀಂಕೋರ್ಟ್ ತೀರ್ಪನ್ನು ಅವರು ಉಲ್ಲೇಖಿಸಿದ್ದಾರೆ.