ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಇದೀಗ ರದ್ದುಗೊಂಡಿರುವ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಪ್ರಕರಣಗಳಲ್ಲಿ ಮನೀಶ್ ಸಿಸೋಡಿಯಾಗೆ ನ್ಯಾಯಾಲಯವು ನಿಯಮಿತ ಜಾಮೀನು ಮಂಜೂರು ಮಾಡಿದೆ. 17 ತಿಂಗಳ ಬಳಿಕ ಸಿಸೋಡಿಯಾ ಜೈಲಿನಿಂದ ಹೊರಬರಲಿದ್ದಾರೆ.