ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ರೂಸ್ ಅವೆನ್ಯೂ ಕೋರ್ಟ್ ಡಿಸೆಂಬರ್ 11ರವರೆಗೆ ವಿಸ್ತರಿಸಿದೆ.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ, ಜಾರಿ ನಿರ್ದೇಶನಾಲಯವು ಇನ್ನೂ ಹಲವಾರು ದಾಖಲೆಗಳನ್ನು ಸಲ್ಲಿಸಬೇಕಾಗಿದೆ ಎಂಬುದನ್ನು ಗಮನಿಸಿತು ಮತ್ತು ಆರೋಪಿಯ ನ್ಯಾಯಾಂಗ ಬಂಧನವನ್ನು ಡಿಸೆಂಬರ್ 11ರ ವರೆಗೆ ವಿಸ್ತರಿಸಿ ಆದೇಶಿಸಿದೆ.
ಫೆಬ್ರವರಿ 2023 ರಲ್ಲಿ, ದೆಹಲಿಯ ಹೊಸ ಅಬಕಾರಿ ನೀತಿ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ.