August 24, 2026
Monday, August 24, 2026
spot_img

ದೆಹಲಿ ಅಗ್ನಿ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಐವರು ಸದಸ್ಯರು ಸಾವನ್ನಪ್ಪಿದ್ದು, ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

ದುರ್ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಕಾರ್ಯಾಲಯ, ಘಟನೆಯಿಂದ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ಮೋದಿ ಅವರು ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಿದ್ದಾರೆ.ಇದೇ ವೇಳೆ ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳ ಪರಿಹಾರ ನೀಡಲಾಗುವುದು. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಈ ಧನಸಹಾಯವನ್ನು ನೀಡಲಾಗುವುದು ಎಂದು ತಿಳಿಸಿದೆ.

ಘಟನೆಯ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಮೋದಿ ಅವರು, ಅಗ್ನಿ ಅವಘಡ ಹೃದಯ ವಿದ್ರಾವಕವಾಗಿದೆ. ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !