ಮುಂದಿನ ತಿಂಗಳು ಜಿ20 ಶೃಂಗಸಭೆ, ವಿವಿಐಪಿ ವಿಮಾನಗಳ ನಿಲುಗಡೆಗೆ ಸಕಲ ಸಿದ್ಧತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂದಿನ ತಿಂಗಳು ನಡೆಯಲಿರುವ ಜಿ-20 ಶೃಂಗಸಭೆಗೆ ರಾಷ್ಟ್ರದ ರಾಜಧಾನಿ ಸಿದ್ಧವಾಗುತ್ತಿದೆ. ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ವಿಶ್ವದೆಲ್ಲೆಡೆಯಿಂದ ಅತಿಥಿಗಳು ಆಗಮಿಸುವುದರಿಂದ ದೆಹಲಿಯ ವಿವಿಧ ಭಾಗಗಳಲ್ಲಿ ವಿವಿಧ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಇದೇ ವೇಳೆ ಅಧಿಕಾರಿಗಳಿಗೆ ಪಾರ್ಕಿಂಗ್ ಸಮಸ್ಯೆ ತಲೆದೋರಿದೆ. ಈ ಪಾರ್ಕಿಂಗ್ ಕಾರು ಅಥವಾ ಬೈಕ್‌ಗೆ ಅಲ್ಲ ಆದರೆ ವಿವಿಐಪಿ ವಿಮಾನಗಳಿಗೆ. ದೆಹಲಿ ಜೊತೆಗೆ ಸಮೀಪದ ನಗರಗಳಲ್ಲಿ ವಿಮಾನ ನಿಲುಗಡೆಗೆ ವ್ಯವಸ್ಥೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಜಿ-20 ಶೃಂಗಸಭೆಯ ಸಂದರ್ಭದಲ್ಲಿ 50 ಕ್ಕೂ ಹೆಚ್ಚು ವಿವಿಐಪಿ ವಿಮಾನಗಳು ಭಾರತಕ್ಕೆ ಆಗಮಿಸಲಿವೆ. ಅನೇಕ ದೇಶಗಳ ಮುಖ್ಯಸ್ಥರು, ಅಧಿಕಾರಿಗಳು ಮತ್ತು ಇತರ ಗಣ್ಯರು ದೆಹಲಿಗೆ ಭೇಟಿ ನೀಡುತ್ತಾರೆ. ಆದರೆ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಪಾಲಂ ವಿಮಾನ ನಿಲ್ದಾಣದಲ್ಲಿ ಕೇವಲ 40 ವಿವಿಐಪಿ ವಿಮಾನಗಳಿಗೆ ಮಾತ್ರ ಪಾರ್ಕಿಂಗ್ ವ್ಯವಸ್ಥೆ ಇದೆ. ಹತ್ತಿರದ ನಗರಗಳಲ್ಲಿ ಇದಕ್ಕಾಗಿ ವ್ಯವಸ್ಥೆ ಮಾಡಲಾಗುತ್ತಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇತ್ತೀಚೆಗೆ ಆಯೋಜಿಸಿದ್ದ ಸಭೆಯಲ್ಲಿ ಈ ವಿಷಯವು ಪ್ರಸ್ತಾಪವಾಯಿತು. ಗೃಹ ಸಚಿವಾಲಯ, ವಾಯುಪಡೆ, ವಿಮಾನ ನಿಲ್ದಾಣ ಮತ್ತು ಸಿಐಎಸ್‌ಎಫ್‌ಗೆ ಸಂಬಂಧಿಸಿದ ಅಧಿಕಾರಿಗಳು ಸಹ ಎಲ್ಲಾ ಸಿದ್ಧತೆಗಳ ಬಗ್ಗೆ ಮಾತನಾಡಿದರು. ಒಟ್ಟು 50 ವಿಮಾನಗಳು ಬರುವುದನ್ನು ನಿರೀಕ್ಷಿಸಲಾಗಿದೆ. ದೆಹಲಿ ವಿಮಾನ ನಿಲ್ದಾಣದ ಜೊತೆಗೆ, ಜೈಪುರ, ಇಂದೋರ್, ಲಕ್ನೋ ಮತ್ತು ಅಮೃತಸರ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳನ್ನು ಇಳಿಸಲು ಸಿದ್ಧತೆಗಳನ್ನು ಮಾಡಲಾಗುತ್ತಿದೆ. ದೆಹಲಿ ವಿಮಾನ ನಿಲ್ದಾಣಕ್ಕೆ ಸಮಸ್ಯೆ ಏನೆಂದರೆ, ಸೆಪ್ಟೆಂಬರ್ 8, 9 ಮತ್ತು 10 ರಂದು, ವಿವಿಐಪಿ ಜೊತೆಗೆ ಸಾಮಾನ್ಯ ವಿಮಾನಗಳ ಹಾರಾಟವೂ ಮುಕ್ಯವಾಗಿರುವುದರಿಂದ  ಎಲ್ಲಾ ಅಂಶಗಳನ್ನು ಪರಿಗಣಿಸಲಾಗುತ್ತಿದೆ.

ಈ ಬಾರಿ ಭಾರತವೇ ಜಿ-20 ಶೃಂಗಸಭೆಯ ನೇತೃತ್ವ ವಹಿಸಿದ್ದು, ಸೆ.9-10ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಷ್ಯಾ, ಅಮೆರಿಕದಂತಹ ದೊಡ್ಡ ರಾಷ್ಟ್ರಗಳ ಮುಖ್ಯಸ್ಥರೂ ಭಾರತಕ್ಕೆ ಬರುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!