Monday, July 4, 2022

Latest Posts

ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ತಂದೆ ಕೊರೋನಾ ಸೋಂಕಿಗೆ ಬಲಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸೋಂಕಿಗೆ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ತಂದೆ ನಿಧನರಾಗಿದ್ದಾರೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.
‘ರಾಜ್ಯದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ಇಂದು ತಮ್ಮ ತಂದೆಯನ್ನು ಗೆ ಕಳೆದುಕೊಂಡಿದ್ದಾರೆ. ಇದು ದುಃಖದ ಸಂಗತಿ. ಸತ್ಯೇಂದ್ರ ಅವರೇ, ನೀವು ದೆಹಲಿಯ ಜನರಿಗಾಗಿ ನಿರಂತರವಾಗಿ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಮನಸ್ಸನ್ನು ಹಗುರಗೊಳಿಸಲಿ, ಕುಟುಂಬಕ್ಕೆ ದುಃಖ ತಡೆಯುವ ಶಕ್ತಿ ನೀಡಲಿ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕಳೆದ ಇಪ್ಪತ್ತ ನಾಲ್ಕು ಗಂಟೆಯ ಅವಧಿಯಲ್ಲಿ ದೆಹಲಿಯಲ್ಲಿ 412 ಮಂದಿ ಸೋಂಕಿನಿಂದ ಮೃತರಾಗಿದ್ದು, ಇದರೊಂದಿಗೆ ದೆಹಲಿಯ ಒಟ್ಟಾರೆ ಸಾವಿನ ಸಂಖ್ಯೆ 16,559 ಕ್ಕೆ ಏರಿಕೆಯಾಗಿದೆ ಎಂದು ದೆಹಲಿಯ ಆರೋಗ್ಯ ಸಚಿವಾಲಯ ಹೊರಡಿಸಿದ ಬುಲೆಟಿನ್ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss