ಅಗ್ನಿಪಥಕ್ಕೆ ತಡೆ ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಅಗ್ನಿಪಥ ಯೋಜನೆಯ ಮೂಲಕ ಸಶಸ್ತ್ರ ಪಡೆಗಳಿಗೆ ನೇಮಕಾತಿ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಎಲ್ಲಾ ಅರ್ಜಿಗಳಿಗೆ ಸಮಗ್ರ ಉತ್ತರವನ್ನು ಸಲ್ಲಿಸುವಂತೆ ದೆಹಲಿ ಹೈಕೋರ್ಟ್‌ ಕೇಂದ್ರವನ್ನು ಕೇಳಿದೆ.

ಹಾಗೂ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರ ಪೀಠವು ಯೋಜನೆಗೆ ತಡೆ ನೀಡಲು ನಿರಾಕರಿಸಿದೆ.

17 ಮತ್ತು 21 ವರ್ಷದೊಳಗಿನ ಯುವಕರನ್ನು ಸಶಸ್ತ್ರ ಪಡೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಜೂನ್ 14 ರಂದು ಅಗ್ನಿಪಥ್ ಯೋಜನೆಯನ್ನು ಘೋಷಿಸಲಾಯಿತು. ಈ ಯೋಜನೆಯು ಅಭ್ಯರ್ಥಿಗಳಿಗೆ ಆರಂಭಿಕವಾಗಿ ನಾಲ್ಕು ವರ್ಷಗಳ ಅವಧಿಗೆ ಸೇವೆ ಸಲ್ಲಿಸಲು ಅನುಮತಿಸುತ್ತದೆ ಮತ್ತು ಅವರಲ್ಲಿ ಶೇಕಡಾ 25 ರಷ್ಟು ಆಯ್ದ ಅಭ್ಯರ್ಥಿಗಳಿಗೆ ಖಾಯಂ ಆಗಿ ಸೇವೆ ಸಲ್ಲಿಸುವ ಅವಕಾಶ ನೀಡುತ್ತದೆ. ಆದರೆ ಈ ಯೋಜನೆಯು ತೀವ್ರ ಟೀಕೆಗೆ ಗುರಿಯಾಯಿತು ಮತ್ತು ಹಲವಾರು ರಾಜ್ಯಗಳಲ್ಲಿ ಪ್ರತಿಭಟನೆ ದೊಂಬಿಗಳಿಗೆ ಕಾರಣವಾಯಿತು. ಸರ್ಕಾರವು 2022 ರಲ್ಲಿ ಯೋಜನೆಯ ಅಡಿಯಲ್ಲಿ ನೇಮಕಾತಿಗಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು 23 ವರ್ಷಗಳಿಗೆ ವಿಸ್ತರಿಸಿತು.

ಈಗಾಗಲೇ ಅಗ್ನಿಪಥ ನೇಮಕಾತಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು ಹಲವಾರು ಅಭ್ಯರ್ಥಿಗಳು ಸೇವೆ ಸಲ್ಲಿಸಲು ಮುಂಚೂಣಿಯಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!