ದೆಹಲಿಯ ಹಿಟ್ ಅಂಡ್ ರನ್ ಪ್ರಕರಣ: ಮತ್ತಿಬ್ಬರು ಆರೋಪಿಗಳಿಗೆ ಹುಡುಕಾಟ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿಯ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳು ಕೂಡ ಭಾಗಿಯಾಗಿರುವುದಾಗಿ ತಿಳಿದುಬಂದಿದ್ದು, ಈ ಇಬ್ಬರ ಬಂಧನಕ್ಕಾಗಿ ಹುಡುಕಾಟ ಮುಂದುವರೆದಿದೆ ಎಂದು ದೆಹಲಿ ಪೊಲೀಸರು ಗುರುವಾರ ಹೇಳಿದ್ದಾರೆ.

ಕಾರಿನ ಮಾಲೀಕ ಅಶುತೋಷ್ ಮತ್ತು ಆರೋಪಿಗಳಲ್ಲಿ ಒಬ್ಬನ ಸಹೋದರನಾಗಿರುವ ಅಂಕುಶ್ ಎಂಬುವವರ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಐವರನ್ನು ಹೊರತುಪಡಿಸಿ ಇನ್ನೂ ಇಬ್ಬರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ನಮ್ಮ ಬಳಿ ಈ ಬಗ್ಗೆ ಸಾಕ್ಷ್ಯಾಧಾರಗಳಿವೆ. ಅಪರಾಧವೊಂದನ್ನು ಎಸಗಿ ಅದನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ.ಬಂಧನದಲ್ಲಿರುವ ಆರೋಪಿಗಳನ್ನೂ ರಕ್ಷಿಸಲು ಪ್ರಯತ್ನ ನಡೆಸುತ್ತಿದ್ದಾರೆಂದು ಹಿರಿಯ ಪೊಲೀಸ್ ಅಧಿಕಾರಿ ಸಾಗರ್ಪ್ರೀತ್ ಹೂಡಾ ಅವರು ಹೇಳಿದ್ದಾರೆ.

ಕಾರನ್ನು ದೀಪಕ್ ಖನ್ನಾ ಚಾಲನೆ ಮಾಡುತ್ತಿರಲಿಲ್ಲ. ಅಮಿತ್ ಖನ್ನಾ ಕಾರು ಚಾಲನೆ ಮಾಡುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಅಮಿತ್ ಬಳಿ ಡ್ರೈವಿಂಗ್ ಲೈಸೆನ್ಸ್ ಇರಲಿಲ್ಲ.

ಇನ್ನು ಆರೋಪಿ ಮತ್ತು ಸಂತ್ರಸ್ತೆಯ ನಡುವೆ ಯಾವುದೇ ಸಂಬಂಧವಿಲ್ಲ. ಕೈಗೆ ಸಿಗದೆ ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳು ಪ್ರಕರಣ ಮುಚ್ಚಿಹಾಕಲು ಯತ್ನಗಳನ್ನು ನಡೆಸುತ್ತಿದ್ದಾರೆ. ಕಾರಿನಡಿ ಅಂಜಲಿ ಸಿಲುಕಿಕೊಂಡಿರುವುದು ಅವರಿಗೆ ತಿಳಿದಿತ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲು ಪ್ರಯತ್ನಗಳನ್ನು ನಡೆಸಲಾಗುತ್ತಿದ್ದು, ಅಂಜಲಿ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!