ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಭಾರೀ ಮಳೆಯಾಗಿದ್ದು, ಹಲವು ಮನೆಗಳು, ಕಚೇರಿಗಳು, ಶಾಲೆಗಳು ಮತ್ತು ಅಂಗಡಿಗಳಿಗೆ ನೀರು ನುಗ್ಗಿದೆ. ಹೃದಯ ವಿದ್ರಾವಕ ಘಟನೆಯೊಂದರಲ್ಲಿ ದೆಹಲಿಯ ಐಎಎಸ್ ತರಬೇತಿ ಕೇಂದ್ರಕ್ಕೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ದೆಹಲಿಯ ಈ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಯಲ್ಲಿರುವ ಓಲ್ಡ್ ರಾಜಿಂದರ್ ರಾವ್ ನಗರ ಪ್ರದೇಶದ ಐಎಎಸ್ ತರಬೇತಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ.
ಆರಂಭದಲ್ಲಿ ಎನ್‌ಡಿಆರ್‌ಎಫ್, ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ದಳದ ರಕ್ಷಣಾ ಕಾರ್ಯಾಚರಣೆಯಲ್ಲಿ ವಿದ್ಯಾರ್ಥಿನಿಯರ ಮೃತದೇಹವನ್ನು ಸ್ಥಳದಿಂದ ಹೊರತೆಗೆಯಲಾಯಿತು. ಗಂಟೆಗಳ ಬಳಿಕ ಇನ್ನಿಬ್ಬರು ವಿದ್ಯಾರ್ಥಿಗಳ ಶವವೂ ಪತ್ತೆಯಾಗಿದೆ.
ಕೋಚಿಂಗ್ ಸೆಂಟರ್‌ಗೆ ನೀರು ನುಗ್ಗಿದಾಗ ಒಳಗೆ ಸುಮಾರು 30 ವಿದ್ಯಾರ್ಥಿಗಳು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ 13 ರಿಂದ 14 ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೆ, ಇತರರು ಸ್ಥಳದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.