ತಡರಾತ್ರಿ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ಜರುಗಿದೆ. ದೆಹಲಿಯ ಅಲಿಪುರ ರಸ್ತೆಯಲ್ಲಿ ಬುಧವಾರ ತಡರಾತ್ರಿ ಈ ಘಟನೆ ನಡೆದಿದ್ದು, ಅಪಘಾತ ಸಂಭವಿಸಿದ ಕೂಡಲೇ ಗಾಯಾಳುಗಳು ಕಿರುಚಿಕೊಂಡಿದ್ದರಿಂದ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದಾರೆ.

ತಕ್ಷಣವೇ ಗಾಯಾಳುಗಳನ್ನು ಆಂಬ್ಯುಲೆನ್ಸ್ ಸಹಾಯದಿಂದ ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆ ನೀಡುತ್ತಿರುವ ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಪತ್ತೆಗೆ ಪೊಲೀಸರು ಯತ್ನಿಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!