ದೆಹಲಿ ಮದ್ಯ ನೀತಿ ಪ್ರಕರಣ: ಚಾರ್ಜ್ ಶೀಟ್‌ನಲ್ಲಿ ಆಪ್ ನಾಯಕ ರಾಘವ್ ಚಡ್ಡಾ ಹೆಸರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ (Delhi liquor policy case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ED) ಪೂರಕ ಆರೋಪಪಟ್ಟಿಯಲ್ಲಿ ಎಎಪಿ ಪಕ್ಷದ (Aam Aadmi Party) ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಹೆಸರು ಸೇರಿಸಿದೆ ಎಂದು ಹೇಳಿದೆ.

ಮದ್ಯ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಘವ್ ಚಡ್ಡಾ(Raghav Chadha) ಆರೋಪಿಯಾಗಿಲ್ಲದಿದ್ದರೂ ಸಂಸದರ ಹೆಸರನ್ನು ಜಾರಿ ನಿರ್ದೇಶನಾಲಯ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದೆ.

ಚಾರ್ಜ್ ಶೀಟ್‌ನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಂಜಯ್ ಸಿಂಗ್ ಸೇರಿ ಪಕ್ಷದ ಇತರ ನಾಯಕರನ್ನು ಹೆಸರಿಸಲಾಗಿದೆ.
ಬಂಧಿತ ಮಾಜಿ ಸಚಿವ ಮನೀಶ್ ಸಿಸೋಡಿಯಾ ಅವರ ಮನೆಯಲ್ಲಿ ನಡೆದ ಸಭೆಯಲ್ಲಿ ರಾಘವ್ ಚಡ್ಡಾ ಭಾಗವಹಿಸಿದ್ದರು, ಇದೀಗ ರದ್ದುಗೊಂಡಿರುವ ಮದ್ಯ ನೀತಿಯನ್ನು ತರುವ ಯೋಜನೆಯ ಬಗ್ಗೆ ಉದ್ಯಮಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!