Monday, October 2, 2023

Latest Posts

ಮದ್ಯ ನೀತಿ ಹಗರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಸಿಬಿಐ ಬಂಧನಕ್ಕೆ ಒಳಗಾಗಿದ್ದರು. ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರಿದ್ದ ಏಕಸದಸ್ಯ ಪೀಠ ಇಂದು (ಮೇ30) ಜಾಮೀನು ಅರ್ಜಿ ನಿರಾಕರಿಸಿ ತೀರ್ಪು ಹೊರಡಿಸಿದೆ.

ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಮನೀಶ್ ಸಿಸೋಡಿಯಾ ವಿರುದ್ಧದ ಆರೋಪಗಳು ಗಂಭೀರವಾಗಿವೆ. ಉಪಮುಖ್ಯಮಂತ್ರಿಯಾಗಿದ್ದಾಗ ಸಿಸೋಡಿಯಾ 18 ಖಾತೆಗಳನ್ನು ಹೊಂದಿದ್ದರು. ಜಾಮೀನು ನೀಡಿದಲ್ಲಿ ಪೂರಕ ಸಾಕ್ಷಿಗಳ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ ಅವರಿಗೆ ಜಾಮೀನು ನೀಡಲಾಗುವುದಿಲ್ಲ ಎಂದು ತಿಳಿಸಿದೆ.

ಮನೀಶ್ ಸಿಸೋಡಿಯಾ ಸದ್ಯ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ದೆಹಲಿ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಮನೀಶ್ ಸಿಸೋಡಿಯಾ ಕಳೆದ ಫೆಬ್ರವರಿ 26 ರಂದು ಸಿಬಿಐ ಬಂಧನಕ್ಕೊಳಗಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!