ದೆಹಲಿ ಮದ್ಯ ನೀತಿ ಪ್ರಕರಣ: ಕೆಸಿಆರ್ ಪುತ್ರಿ ಕೆ. ಕವಿತಾ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ (Delhi liquor policy case) ಬಿಆರ್‌ಎಸ್ ಎಂಎಲ್‌ಸಿ , ಕೆಸಿಆರ್ ಪುತ್ರಿ ಕೆ. ಕವಿತಾ (K kavitha) ಅವರನ್ನು ಜಾರಿ ನಿರ್ದೇಶನಾಲಯ (ED) ಶುಕ್ರವಾರ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇಂದು ಕವಿತಾ ಅವರ ಹೈದರಾಬಾದ್‌ ನಿವಾಸದ ಮೇಲೆ ಇಡಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿತ್ತು. ಈ ವೇಳೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಇಡಿ ಅಧಿಕಾರಿಗಳು ಸಂಜೆ ವೇಳೆ ವಿಧಾನ ಪರಿಷತ್‌ ಸದಸ್ಯೆಯಾಗಿರುವ ಕವಿತಾ ಅವರನ್ನು ಬಂಧಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಎಎಪಿ ನಾಯಕ ವಿಜಯ್ ನಾಯರ್ ಅವರು ಕೆಲವು ಉದ್ಯಮಿಗಳು ಮತ್ತು ರಾಜಕಾರಣಿಗಳ ನಿಯಂತ್ರಣದಲ್ಲಿರುವ ‘ದಕ್ಷಿಣ ಗುಂಪಿನಿಂದ’ 100 ಕೋಟಿ ರೂಪಾಯಿಗಳನ್ನು ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪವಿದೆ. ಕವಿತಾ ಅವರು 100 ಕೋಟಿ ರೂಪಾಯಿ ಕಿಕ್‌ಬ್ಯಾಕ್ ಪಾವತಿಸಿದ ಮದ್ಯದ ಕಾರ್ಟೆಲ್ ‘ದಿ ಸೌತ್ ಗ್ರೂಪ್’ ನ ಭಾಗವಾಗಿದ್ದರು ಎಂದು ಇಡಿ ಆರೋಪಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!