Tuesday, March 28, 2023

Latest Posts

ದೆಹಲಿ ಮದ್ಯ ನೀತಿ ಪ್ರಕರಣ: ಜಾಮೀನಿಗಾಗಿ ಕೋರ್ಟ್ ಮೆಟ್ಟಿಲೇರಿದ ಮನೀಶ್ ಸಿಸೋಡಿಯಾ!

ಹೊಸದಿಗಂತ ಡಿಜಿಟಲ್ ಡೆಸ್ಕ್‌ :

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ (Liquor Policy Case) ಸಿಬಿಐನಿಂದ ಬಂಧಿತರಾಗಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ (Manish Sisodia) ಅವರು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಸಿಸೋಡಿಯಾ ಅವರ ಐದು ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಳ್ಳಲಿದ್ದು, ಜಾಮೀನು ವಿಚಾರಣೆ ಶನಿವಾರ ನಡೆಯಲಿದೆ.

ದೆಹಲಿ ಸಚಿವ ಸಂಪುಟ ಮತ್ತು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿಸೋಡಿಯಾ ಅವರನ್ನು ಶನಿವಾರ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ಸಿಬಿಐಬಂಧನವನ್ನು ಪ್ರಶ್ನಿಸಿ ಸಿಸೋಡಿಯಾ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿತ್ತು. ಪರ್ಯಾಯ ಪರಿಹಾರಗಳಿಗಾಗಿ ಹೈಕೋರ್ಟ್ ಅನ್ನು ಸಂಪರ್ಕಿಸಲು ಸೂಚಿಸಿದ ನಂತರ ಈ ಬೆಳವಣಿಗೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!