ಅಬಕಾರಿ ಹಗರಣ: ಪಿಎನ್‌ಬಿ ಬ್ಯಾಂಕ್‌ನಲ್ಲಿ ಸಿಸೋಡಿಯಾ ಲಾಕರ್‌ಗಳನ್ನು ತೆರೆಸಿದ ಸಿಬಿಐ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮದ್ಯ ಹಗರಣದ ತನಿಖೆಯಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸೇರಿದ ಬ್ಯಾಂಕ್ ಲಾಕರ್‌ಗಳ ಪರಿಶೀಲನೆಗೆ ಸಿಬಿಐ ಸಿದ್ಧವಾಗಿವೆ. ಇದರ ಭಾಗವಾಗಿ ಇಂದು ಸಿಬಿಐ ಅಧಿಕಾರಿಗಳು ಮನೀಶ್ ಸಿಸೋಡಿಯಾ ಅವರ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿರುವ ಅವರ ಬ್ಯಾಂಕ್ ಲಾಕರ್‌ಗಳನ್ನು ತೆರೆದಿದ್ದಾರೆ. ಅವರಿಗೆ ಸಂಬಂಧಿಸಿದ ಬ್ಯಾಂಕ್ ವ್ಯವಹಾರಗಳ ಬಗ್ಗೆ ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಘಾಜಿಯಾಬಾದ್ ಬ್ಯಾಂಕ್‌ನಲ್ಲಿ ಸಿಸೋಡಿಯಾ ಮತ್ತು ಅವರ ಪತ್ನಿ ಸಮ್ಮುಖದಲ್ಲಿ ಸಿಬಿಐ ಅಧಿಕಾರಿಗಳು ಬ್ಯಾಂಕ್ ಲಾಕರ್‌ಗಳನ್ನು ಪರಿಶೀಲಿಸುತ್ತಿದ್ದಾರೆ.

ಮದ್ಯ ಹಗರಣ ಪ್ರಕರಣದಲ್ಲಿ ದೆಹಲಿ ಎಎಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿರುವುದು ಗೊತ್ತೇ ಇದೆ. ದೆಹಲಿ ಅಬಕಾರಿ ನೀತಿ 2021-22ರ ಅನುಷ್ಠಾನದಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸುಮಾರು 15 ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 10 ದಿನಗಳ ಹಿಂದೆ ಸಿಬಿಐ ಅಧಿಕಾರಿಗಳು ಮನೀಶ್ ಮನೆ ಮೇಲೆ ದಾಳಿ ನಡೆಸಿದ್ದರು. ಆಗಸ್ಟ್ 19 ರಂದು, ಸಿಸೋಡಿಯಾ ಅವರ ನಿವಾಸ ಸೇರಿದಂತೆ ಫೆಡರಲ್ ಪ್ರೋಬ್ ಏಜೆನ್ಸಿ ಅಂದಾಜು 31 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.

ಈ ಪ್ರಕ್ರಿಯೆಯಲ್ಲಿ ಸಿಬಿಐ ಅಧಿಕಾರಿಗಳು ಇಂದು ಮನೀಶ್‌ಗೆ ಸಂಬಂಧಿಸಿದ ಬ್ಯಾಂಕ್ ಲಾಕರ್‌ಗಳನ್ನು ತೆರೆದು ಬ್ಯಾಂಕ್ ವಹಿವಾಟುಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಲಾಕರ್‌ನಲ್ಲಿ ಯಾವ ರೀತಿಯ ದಾಖಲೆಗಳು ಹೊರಬರುತ್ತವೆ ಎಂದು ಕಾದು ನೋಡಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!