ದೆಹಲಿ ಮದ್ಯ ಹಗರಣ: ನನ್ನ ಮೇಲಿನ ಆರೋಪ ‘ಬೋಗಸ್-ಸುಳ್ಳು’ ಎಂದ ಕೆಸಿಆರ್ ಪುತ್ರಿ ಕೆ ಕವಿತಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪಗಳು ‘ಬೋಗಸ್ ಮತ್ತು ಸುಳ್ಳು’ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರು ಬುಧವಾರ ಹೇಳಿದ್ದಾರೆ.

ತಮ್ಮ ವಿರುದ್ಧದ ಆರೋಪಗಳನ್ನು ಬಿಜೆಪಿ ‘ರಾಜಕೀಯ ಸೇಡು’ . ಸಮಯವೇ ತಮ್ಮ ಪ್ರಾಮಾಣಿಕತೆಯನ್ನು ಸಾಬೀತುಪಡಿಸುತ್ತದೆ ಎಂದು ಕವಿತಾ ಹೇಳಿದ್ದಾರೆ.
‘ನನ್ನ ಮೇಲಿನ ಆರೋಪಗಳು ಸಂಪೂರ್ಣ ಬೋಗಸ್ ಮತ್ತು ಸುಳ್ಳು. ಸಮಯ ಮಾತ್ರ ನನ್ನ ಪ್ರಾಮಾಣಿಕತೆಯನ್ನು ಸಾಬೀತುಪಡಿಸುತ್ತದೆ. ಇದು ಬಿಜೆಪಿಯ ರಾಜಕೀಯ ಸೇಡಿನ ಕ್ರಮವಾಗಿದ್ದು, ಬಿಆರ್ಎಸ್ ಪಕ್ಷದ ಮುಖ್ಯಸ್ಥ ಸಿಎಂ ಕೆಸಿಆರ್ ಜಿ ಅವರು ತಮ್ಮ ರೈತ ವಿರೋಧಿ ಮತ್ತು ಬಂಡವಾಳಶಾಹಿ ಪರ ನೀತಿಗಳನ್ನು ಬಹಿರಂಗಪಡಿಸುತ್ತಾರೆ ಎಂದು ಭಯಪಟ್ಟು ಅವರು ಈ ರೀತಿ ಮಾಡುತ್ತಿದ್ದಾರೆ’ ಎಂದು ಕವಿತಾ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಸಂಸದ ಹಾಗೂ ತೆಲಂಗಾಣ ಉಸ್ತುವಾರಿ ಮಾಣಿಕಂ ಠಾಗೋರ್ ಮತ್ತು ಬಿಜೆಪಿ ನಾಯಕ ಕೋಮಟಿರೆಡ್ಡಿ ರಾಜಗೋಪಾಲ್ ರೆಡ್ಡಿ ಅವರ ಟ್ವೀಟ್ ಗಳಿಗೆ ಈ ಹೇಳಿಕೆ ನೀಡಿದ್ದಾರೆ.

ಇ.ಡಿ ಪ್ರಕಾರ, ಕವಿತಾ, ಅರಬಿಂದೋ ಫಾರ್ಮಾ ನಿರ್ದೇಶಕ ಶರತ್ ಚಂದ್ರ ರೆಡ್ಡಿ ಮತ್ತು ವೈಎಸ್‌ಆರ್ ಕಾಂಗ್ರೆಸ್ ಸಂಸದ ಮಾಗುಂಟ ಶ್ರೀನಿವಾಸಲು ರೆಡ್ಡಿ ಅವರನ್ನೊಳಗೊಂಡ ಸೌತ್ ಗ್ರೂಪ್, ರಾಷ್ಟ್ರ ರಾಜಧಾನಿಯಲ್ಲಿ ಮದ್ಯದ ವ್ಯವಹಾರದ ಮೇಲೆ ಹಿಡಿತ ಸಾಧಿಸಲು ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿಗೆ 100 ಕೋಟಿ ರೂ. ಕೊಟ್ಟಿದ್ದರು ಎಂದಿತ್ತು.

ಡಿ. 11 ರಂದು ಕೇಂದ್ರ ತನಿಖಾ ದಳ (ಸಿಬಿಐ) ಕವಿತಾ ಅವರನ್ನು ಏಳು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿತ್ತು.

ನವೆಂಬರ್ 30 ರಂದು, ದೆಹಲಿ ಮದ್ಯ ನೀತಿ ಹಗರಣದಲ್ಲಿ ಉದ್ಯಮಿ ಅಮಿತ್ ಅರೋರಾ ಅವರ ಬಂಧನಕ್ಕಾಗಿ ಇ.ಡಿ ದೆಹಲಿ ನ್ಯಾಯಾಲಯಕ್ಕೆ ಸಲ್ಲಿಸಿದ ರಿಮಾಂಡ್ ವರದಿಯಲ್ಲಿ ಕವಿತಾ ಹೆಸರು ಕಾಣಿಸಿಕೊಂಡಿತ್ತು. ರಿಮಾಂಡ್ ವರದಿಯ ಪ್ರಕಾರ, ಪ್ರಕರಣದಲ್ಲಿ ಈಗಾಗಲೇ ಬಂಧಿತರಾಗಿರುವ ಉದ್ಯಮಿ ವಿಜಯ್ ನಾಯರ್ ಅವರು ಸೌತ್ ಗ್ರೂಪ್ನಿಂದ ಎಎಪಿ ನಾಯಕರ ಪರವಾಗಿ 100 ಕೋಟಿ ರೂ. ಪಡೆದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!