ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮದ್ಯ ಹಗರಣದಲ್ಲಿ ಬಂಧಿತರಾಗಿರುವ ಆಪ್ ನಾಯಕ ಮನೀಶ್ ಸಿಸೋಡಿಯಾ ಮತ್ತು ಬಿಆರ್ ಎಸ್ ಎಂಎಲ್ ಸಿ ಕೆ.ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಜುಲೈ 31ರವರೆಗೆ ವಿಸ್ತರಿಸಿದೆ.
ದೆಹಲಿ ನ್ಯಾಯಾಲಯದ ಮುಂದೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪೊಲೀಸರು ಇಬ್ಬರನ್ನೂ ಹಾಜರುಪಡಿಸಿದರು. ಪ್ರಕರಣದಲ್ಲಿ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ಅವರನ್ನು ಬಂಧಿಸಿತ್ತು.
ಮಾರ್ಚ್ 15ರಂದು ಇಡಿ ಕವಿತಾ ಅವರನ್ನು ಬಂಧಿಸಿತ್ತು. ನಂತರ ಆಕೆಯನ್ನು ದೆಹಲಿಯ ತೀಹಾರ್ ಜೈಲಿಗೆ ಸ್ಥಳಾಂತರಿಸಲಾಯಿತು. ಆದರೆ, ಇದೇ ಪ್ರಕರಣದಲ್ಲಿ ಸಿಬಿಐ ಆಕೆಯನ್ನು ಏಪ್ರಿಲ್ 11ರಂದು ಬಂಧಿಸಿತ್ತು. ಅಂದಿನಿಂದ ಆಕೆ ಜೈಲಿನಲ್ಲಿದ್ದಾರೆ.
ಇದೇ ಪ್ರಕರಣದಲ್ಲಿ ಫೆಬ್ರವರಿ 26, 2023 ರಂದು ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು. ನಂತರ ಇಡಿ ಈ ವರ್ಷದ ಮಾರ್ಚ್ 9 ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದೆ. ಅಂದಿನಿಂದ ಇಂದಿನವರೆಗೂ ಜಾಮೀನು ಸಿಕ್ಕಿಲ್ಲ.