ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮದ್ಯನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಮತ್ತು ಸಿಬಿಐ ದಾಖಲಿಸಿರುವ ಪ್ರಕರಣಗಳಲ್ಲಿ ಕವಿತಾಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಪ್ರತಿವಾದಿಗಳ ವಾದವನ್ನು ಆಲಿಸದೆ ಮಧ್ಯಂತರ ಪರಿಹಾರ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಪ್ರತಿವಾದಿ ತನಿಖಾ ಸಂಸ್ಥೆಗಳಾದ ಇಡಿ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕವಿತಾ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಾ ಅವರು, ಕೂಡಲೇ ತನಿಖೆ ಕೈಗೆತ್ತಿಕೊಳ್ಳಬೇಕು ಎಂದು ಮನವಿ ಮಾಡಿದರು.
20ರಂದು ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿ.ವಿಶ್ವನಾಥನ್ ಅವರ ಪೀಠ ಸ್ಪಷ್ಟಪಡಿಸಿದೆ.