Tuesday, October 3, 2023

Latest Posts

ದೆಹಲಿಯಲ್ಲಿ ಹಳಿ ತಪ್ಪಿದ ರೈಲು: ತಪ್ಪಿದ ಅನಾಹುತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸ್ಥಳೀಯ ಪ್ರಯಾಣಿಕರ ರೈಲು ಹಳಿ ತಪ್ಪಿರುವ ಘಟನೆ ದೆಹಲಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಹರಿಯಾಣದ ಪಲ್ವಾಲ್‌ನಿಂದ ನವದೆಹಲಿಗೆ ಆಗಮಿಸುತ್ತಿದ್ದ ಲೋಕಲ್ ಟ್ರೈನ್​ ರಾಜಧಾನಿಯ ಪ್ರಗತಿ ಮೈದಾನದ ಬಳಿ ಹಳಿ ತಪ್ಪಿದೆ. ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಆದರೆ ರೈಲಿನ ಒಂದು ಬೋಗಿಗೆ ಹಾನಿಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!