ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾನುವಾರ ಯಮುನಾ ನದಿಯ ನೀರಿನ ಮಟ್ಟ ಮತ್ತೆ ಅಪಾಯಕಾರಿ ಮಟ್ಟಕ್ಕೆ ತಲುಪಿದ್ದರಿಂದ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಬೀಳುತ್ತಿರುವ ಭಾರೀ ಮಳೆ ದೆಹಲಿ ಜನರನ್ನು ಹೈರಾಣಾಗಿಸಿದೆ. ಯಮುನಾ ನದಿಯ ನೀರಿನ ಮಟ್ಟವು ಮತ್ತೆ ಅಪಾಯದ ಮಟ್ಟಕ್ಕೆ ತಲುಪಿದ್ದು, ಹತ್ನಿಕುಂಡ್ ಬ್ಯಾರೇಜ್‌ನಿಂದ 2 ಲಕ್ಷ ಕ್ಯೂಸೆಕ್‌ಗೂ ಹೆಚ್ಚು ನೀರನ್ನು ಬಿಡುಗಡೆ ಮಾಡಲಾಗಿದೆ.
ನದಿಯ ಪ್ರವಾಹದ ಭೀತಿಯಿಂದಾಗಿ ದೆಹಲಿ ಸರ್ಕಾರ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳನ್ನು ಕೈಗೊಂಡಿದ್ದು, ನದಿ ತೀರದ ಜನರನ್ನು ಸ್ಥಳಾಂತರಿಸಲಾಗಿದೆ.
ಮಧ್ಯ ಜಿಲ್ಲೆ, ಪೂರ್ವ ಜಿಲ್ಲೆ, ಯಮುನಾ ಬಜಾರ್ ಮತ್ತು ಯಮುನಾ ಖಾದರ್‌ನಂತಹ ಪ್ರದೇಶಗಳಲ್ಲಿ ಪ್ರವಾಹ ಪರಿಹಾರ ಪುನರ್ವಸತಿ ಕಾರ್ಯಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಜನರು ಜಾಗರೂಕರಾಗಿರಬೇಕು ಮತ್ತು ಅಧಿಕಾರಿಗಳಿಗೆ ಸಹಕರಿಸಬೇಕು ಎಂದು ಸಚಿವೆ ಅತಿಶಿ ಹೇಳಿದರು.