March 22, 2026
Sunday, March 22, 2026
spot_img

ದೆಹಲಿ ಹೈ ಅಲರ್ಟ್: ಕೆಂಪುಕೋಟೆ ಬಳಿ ದಾಳಿಗೆ ಲಷ್ಕರ್ ಸ್ಕೆಚ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದ ರಾಜಧಾನಿ ದೆಹಲಿಯಲ್ಲಿ ಮತ್ತೆ ಭದ್ರತಾ ಎಚ್ಚರಿಕೆ ಜಾರಿಯಾಗಿದೆ. ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಎ-ತೈಬಾ ಕೆಂಪುಕೋಟೆ ಹಾಗೂ ಚಾಂದಿನಿ ಚೌಕ್ ಪ್ರದೇಶವನ್ನು ಗುರಿಯಾಗಿಸಿ ಐಇಡಿ ಸ್ಫೋಟಕಗಳನ್ನು ಬಳಸಿ ದಾಳಿಗೆ ಸಂಚು ರೂಪಿಸಬಹುದು ಎಂಬ ಗುಪ್ತಚರ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ. ಈ ಕುರಿತು ಇನ್ನು ಅಧಿಕೃತ ಮಾಹಿತಿ ಹೊರಬಂದಿಲ್ಲ.

ಫೆಬ್ರವರಿ 6ರಂದು ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ 31 ಮಂದಿ ಮೃತಪಟ್ಟಿದ್ದು, 160ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ದಾಳಿಯ ಹೊಣೆ ಇಸ್ಲಾಮಿಕ್ ಸ್ಟೇಟ್ ಹೊತ್ತಿದ್ದರೂ, ಅದರ ಪ್ರತಿಕಾರವಾಗಿ ಲಷ್ಕರ್-ಎ-ತೈಬಾ ಸಂಘಟನೆ ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗುವ ಯತ್ನವಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ:

ಇದರ ನಡುವೆ 2025ರ ನವೆಂಬರ್ 10ರಂದು ರೆಡ್ ಫೋರ್ಟ್ ಮೆಟ್ರೋ ಸಮೀಪ ಸಂಭವಿಸಿದ ಕಾರು ಸ್ಫೋಟದ ಪ್ರಕರಣ ಇನ್ನೂ ತನಿಖೆಯಲ್ಲಿದೆ. ಆ ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿ, ಅನೇಕರು ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಏಳು ಮಂದಿಯನ್ನು ಬಂಧಿಸಲಾಗಿದ್ದು, ತನಿಖೆಗೆ NIAಗೆ ಹೆಚ್ಚುವರಿ ಸಮಯ ನೀಡಲಾಗಿದೆ.

ಹೊಸ ಬೆದರಿಕೆ ಹಿನ್ನೆಲೆ ದೆಹಲಿಯಾದ್ಯಂತ ಹೈ ಅಲರ್ಟ್ ಘೋಷಿಸಿ, ಧಾರ್ಮಿಕ ಹಾಗೂ ಐತಿಹಾಸಿಕ ಕೇಂದ್ರಗಳ ಭದ್ರತೆ ಹೆಚ್ಚಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !