ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ಮಸೂದೆಯನ್ನು ಸೋಮವಾರ (ಜುಲೈ 31) ಲೋಕಸಭೆಯಲ್ಲಿ ಮಂಡಿಸಲಾಗುವುದು.
ಈ ಮಸೂದೆಗೆ ಪ್ರಧಾನಿ ಮೋದಿ ಸಂಪುಟ ಈಗಾಗಲೇ ಅನುಮೋದನೆ ನೀಡಿದ್ದು, ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸುಗ್ರೀವಾಜ್ಞೆಗೆ ವಿರೋಧ ವ್ಯಕ್ತಪಡಿಸುತ್ತಿದೆ. ವಿರೋಧ ಪಕ್ಷಗಳು ಕೂಡ ವಿವಾದವನ್ನು ಇತ್ಯರ್ಥಪಡಿಸಲು ಸಿದ್ಧವಾಗಿವೆ ಎಂದು ತೋರುತ್ತದೆ. ಈ ವಿಚಾರ ಕುರಿತು ಪರ-ವಿರೋಧ ವ್ಯಕ್ತವಾಗಿದ್ದು, ಸೋಮವಾರ ಲೋಕಸಭೆಯಲ್ಲಿ ಗದ್ದಲ ನಡೆಯುವ ಸಾಧ್ಯತೆ ಇದೆ.
ಸುಗ್ರೀವಾಜ್ಞೆ ಜಾರಿಯಾದ ನಂತರ ಆಮ್ ಆದ್ಮಿ ಪಕ್ಷ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ನ್ಯಾಯಾಲಯ ಪ್ರಕರಣವನ್ನು ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠಕ್ಕೆ ಹಸ್ತಾಂತರಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಸೂದೆಯನ್ನು ವಿರೋಧಿಸಲು ವಿರೋಧ ಪಕ್ಷದ ನಾಯಕರ ಬೆಂಬಲವನ್ನು ಕೋರಿದರು. ಆಮ್ ಆದ್ಮಿಗೆ ಕಾಂಗ್ರೆಸ್ ಕೂಡ ಬೆಂಬಲ ಸೂಚಿಸಿದೆ.