Tuesday, August 16, 2022

Latest Posts

ಧಾರ್ಮಿಕ ಭಾವನೆ ಘಾಸಿಯಷ್ಟೇ ಅಲ್ಲ, ವಿದೇಶಿ ಫಂಡ್ ಸೇರಿದಂತೆ ಜುಬೇರ್ ವಿರುದ್ಧ ದಾಖಲಾದವು ಹೆಚ್ಚುವರಿ ಪ್ರಕರಣಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಲ್ಲಿ ದೆಹಲಿಯಲ್ಲಿ ಬಂಧಿತನಾಗಿರುವ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಮತ್ತಷ್ಟು ಪ್ರಕರಣಗಳು ದಾಖಲಾಗಿವೆ.
2018 ರಲ್ಲಿ ಹಿಂದೂ ದೇವತೆಯ ವಿರುದ್ಧ ಪೋಸ್ಟ್ ಮಾಡಿದ ಆಕ್ಷೇಪಾರ್ಹ ಟ್ವೀಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಮೊಹಮ್ಮದ್ ಜುಬೈರ್ ನನ್ನು ದೆಹಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ  ಪೊಲೀಸರು 14 ದಿನಗಳ ನ್ಯಾಯಾಂಗ ಬಂಧನವನ್ನು ಕೋರಿದ್ದಾರೆ. ಈ ಪ್ರಕರಣದಲ್ಲಿ ಜುಬೈರ್ ಪಿತೂರಿ ನಡೆಸಿದ್ದು ಮತ್ತು ಸಾಕ್ಷ್ಯ ನಾಶಪಡಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಜುಬೇರ್‌ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಮತ್ತು ಸೆಕ್ಷನ್ 120B (ಕ್ರಿಮಿನಲ್ ಪಿತೂರಿ) ಮತ್ತು 201 (ಸಾಕ್ಷ್ಯದ ಕಣ್ಮರೆಗೆ ಕಾರಣವಾಗುವುದು), ವಿದೇಶಿ ಕೊಡುಗೆ ನಿಯಂತ್ರಣ ಕಾಯಿದೆ ( ಸೆಕ್ಷನ್‌ 35) ರ ಅಡಿ ಹೊಸ ಪ್ರಕರಣಗಳು ದಾಖಲಾಗಿವೆ.
ಜುಬೇರ್ ವಿದೇಶದಿಂದ ಅಕ್ರಮವಾಗಿ ದೇಣಿಗೆ ಪಡೆದಿದ್ದಾರೆ ಎಂದು ನ್ಯಾಯಾಲಯದಲ್ಲಿ ಪೊಲೀಸರು  ಸಾಕ್ಷ್ಯ ಮುಂದಿಟ್ಟಿದ್ದಾರೆ.
ಪೊಲೀಸರು ಹೊಸ ಪ್ರಕರಣಗಳನ್ನು ದಾಖಲಿಸಿದ ಬೆನ್ನಲ್ಲೇ, ಜುಬೇರ್ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಮೊಹಮ್ಮದ್ ಜುಬೇರ್ ಅವರನ್ನು ಬೆಂಬಲಿಸಿ ಟ್ವೀಟ್ ಮಾಡಿದ ಹೆಚ್ಚಿನ ಟ್ವಿಟರ್ ಹ್ಯಾಂಡಲ್‌ಗಳು ಮಧ್ಯಪ್ರಾಚ್ಯ ದೇಶಗಳು ಮತ್ತು ಪಾಕಿಸ್ತಾನದವುಗಳಾಗಿವೆ ಎಂದು ಪೊಲೀಸರು ಮಾಹಿತಿ ಬಿಚ್ಚಿಟ್ಟಿದ್ದಾರೆ.
“ಜುಬೈರ್ ಬಂಧನದ ನಂತರ ಹೆಚ್ಚಿನ ಟ್ವಿಟರ್ ಖಾತೆಗಳು ಯುಎಇ, ಬಹ್ರೇನ್, ಕುವೈತ್ ಮತ್ತು ಪಾಕಿಸ್ತಾನದಂತಹ ದೇಶಗಳಿಂದ ಬಂದಿವೆ. ಈ ಸಂಬಂಧ ನಾವು ಸಾಮಾಜಿಕ ಮಾಧ್ಯಮಗಳ ವಿಶ್ಲೇಷಣೆಯಲ್ಲಿ ತೊಡಗಿದ್ದೇವೆʼ ಎಂದು ದೆಹಲಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss