ಹನುಮ ಜಯಂತಿ ಶೋಭಯಾತ್ರೆಗೆ ಪೊಲೀಸರಿಂದ ಗ್ರೀನ್‌ ಸಿಗ್ನಲ್: ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ಹನುಮಾನ್ ಜಯಂತಿ ಹಿನ್ನೆಲೆ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಶೋಭಯಾತ್ರೆಗೆ ದೆಹಲಿ ಪೊಲೀಸರಿಂದ ಅನುಮತಿ ಸಿಕ್ಕಿದೆ. ನಿರ್ದಿಷ್ಟ ದೂರದವರೆಗೂ ಮಾತ್ರ ಅನುಮತಿ ನೀಡಿದ್ದಾರೆ.

”ಮಾರ್ಗವನ್ನು ಸಿದ್ಧಪಡಿಸಲಾಗಿದೆ.ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶೋಭ ಯಾತ್ರೆಯನ್ನು ನಿಗದಿತ ಅಂತರದಲ್ಲಿ ಹೊರಡಲು ಅನುಮತಿ ನೀಡಲಾಗಿದೆ. ಸಂಘಟನಾ ಸಮಿತಿಯೊಂದಿಗೆ ಚರ್ಚೆ ನಡೆಸಿ ಕಾನೂನು ಪ್ರಕಾರ ಯಾತ್ರೆ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಹಿಂದಿನ ದಿನ, ಏಪ್ರಿಲ್ 6 ರಂದು ಹನುಮ ಜಯಂತಿಯಂದು ರಾಷ್ಟ್ರ ರಾಜಧಾನಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಮೆರವಣಿಗೆಗಳನ್ನು ಕೈಗೊಳ್ಳಲು ವಿಶ್ವ ಹಿಂದೂ ಪರಿಷತ್ ಮತ್ತು ಇನ್ನೊಂದು ಗುಂಪಿಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದರು. ಇದೀಗ ಒಂದಷ್ಟು ನಿರ್ದಿಷ್ಟ ಮಾರ್ಗಸೂಚಿ ನೀಡಿದ್ದಾರೆ.

ಕಳೆದ ವರ್ಷ ಏಪ್ರಿಲ್ 16 ರಂದು, ಹನುಮ ಜಯಂತಿಯಂದು “ಶೋಭಯಾತ್ರೆ” ಸಂದರ್ಭದಲ್ಲಿ ಈ ಪ್ರದೇಶದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿತ್ತು. ಹನುಮ ಜಯಂತಿ ಹಿನ್ನೆಲೆಯಲ್ಲಿ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ, ರಾಮನವಮಿ ಮೆರವಣಿಗೆಯಲ್ಲಿ ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಇತ್ತೀಚಿನ ಹಿಂಸಾಚಾರದ ನಂತರ, ಕೇಂದ್ರ ಗೃಹ ಸಚಿವಾಲಯ (MHA) ಎಲ್ಲಾ ರಾಜ್ಯಗಳಿಗೆ ಸಿದ್ಧತೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ಸಲಹೆಯನ್ನು ನೀಡಿತು.

ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಮತ್ತು ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಅಂಶಗಳ ಮೇಲ್ವಿಚಾರಣೆ ನಡೆಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!