ಇನ್ನು ಮುಂದೆ ರಾಷ್ಟ್ರ ರಾಜಧಾನಿಯಲ್ಲಿ ಡ್ರೋನ್, ಬಲೂನ್-ಪ್ಯಾರಾಗ್ಲೈಡರ್ ಹಾರಾಟ ನಿಷೇಧ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸ್ವಾತಂತ್ರ್ಯ ದಿನಾಚರಣೆ ಹತ್ತಿರ ಬರುತ್ತಿದ್ದಂತೆ ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ. ದೆಹಲಿ ಪೊಲೀಸರು ಜುಲೈ 22 ರಿಂದ ಆಗಸ್ಟ್ 16 ರವರೆಗೆ ರಾಷ್ಟ್ರ ರಾಜಧಾನಿಯ ಆಕಾಶದಲ್ಲಿ ಪ್ಯಾರಾಗ್ಲೈಡರ್‌ಗಳು, ಹ್ಯಾಂಗ್-ಗ್ಲೈಡರ್‌ಗಳು ಮತ್ತು ಬಿಸಿ ಗಾಳಿಯ ಬಲೂನ್‌ಗಳನ್ನು ಹಾರಿಸುವುದನ್ನು ನಿಷೇಧಿಸಿದ್ದಾರೆ. ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದೆಹಲಿ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಸಮಾಜ ವಿರೋಧಿ ಶಕ್ತಿಗಳು ಮತ್ತು ಭಾರತ ವಿರೋಧಿ ಭಯೋತ್ಪಾದಕರು ಪ್ಯಾರಾಗ್ಲೈಡರ್‌ಗಳು ಮತ್ತು ಪ್ಯಾರಾ-ಮೋಟರ್‌ಗಳ ಮೂಲಕ ಭದ್ರತಾ ವ್ಯವಸ್ಥೆಯನ್ನು ಭೇದಿಸಬಹುದು. ಇವುಗಳ ಮೂಲಕ ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಸಾಧ್ಯತೆಗಳಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದರ ಉಲ್ಲಂಘನೆಯು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188ರ ಅಡಿಯಲ್ಲಿ ಶಿಕ್ಷಾರ್ಹವಾಗಿ ತೆಗೆದುಕೊಳ್ಳಲಾಗುವುದು. ಸಾರ್ವಜನಿಕ ಅಧಿಕಾರಿಗಳು ಅಧಿಕೃತ ಆದೇಶಗಳನ್ನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು. ಶನಿವಾರದಿಂದ ಆಗಸ್ಟ್ 16ರವರೆಗೆ 26 ದಿನಗಳ ಕಾಲ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ದೆಹಲಿ ಪೊಲೀಸರು ಆದೇಶದಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!