ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಮಾಸ್-ಇಸ್ರೇಲ್ ಯುದ್ಧದ ಹಿನ್ನೆಲೆಯಲ್ಲಿ ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಮತ್ತು ರಾಯಭಾರಿ ಅಧಿಕಾರಿಗಳ ಅಧಿಕೃತ ನಿವಾಸಗಳಿಗೆ ದೆಹಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಮುಂದುವರಿದಿದೆ. ಇಸ್ರೇಲಿಗರನ್ನು ಗುರಿಯಾಗಿಸಿರುವ ಭಯೋತ್ಪಾದಕರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ, ದೆಹಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಹಾಗಾಗಿಯೇ ಇಸ್ರೇಲ್‌ನ ರಾಯಭಾರಿ ಕಚೇರಿ, ರಾಯಭಾರಿ ನೂರ್ ಗಿಲೋನ್ ಅವರ ಅಧಿಕೃತ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.
ನವದೆಹಲಿಯ ಪಹರ್‌ಗಂಜ್ ಪ್ರದೇಶದಲ್ಲಿ ಯಹೂದಿಗಳ ಧಾರ್ಮಿಕ ಸ್ಥಳವಾದ ಚಾಬಾದ್ ಹೌಸ್ ಬಳಿಯೂ ಭದ್ರತೆಯನ್ನು ಹೆಚ್ಚಿಸಲಾಗಿದೆ. 2021ರಲ್ಲಿ, ಇಸ್ರೇಲಿ ರಾಯಭಾರ ಕಚೇರಿಯ ಬಳಿ ಭಯೋತ್ಪಾದಕರು ಸುಧಾರಿತ ಸ್ಫೋಟಕ ಸಾಧನವನ್ನು ಸ್ಫೋಟಿಸಿದರು. ಅದೃಷ್ಟವಶಾತ್ ಸ್ಫೋಟದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.