ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಮಳೆ ಅಬ್ಬರಿಸುತ್ತಿದ್ದು,ಯಮುನಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ದೆಹಲಿಯ ಬಹುತೇಕ ಪ್ರದೇಶಗಳು ಜಲಾವೃತಗೊಂಡಿದೆ.
ಇದುಒಂದೆಡೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ತಲೆನೋವಾಗಿದ್ದರೆ ಮತ್ತೊಂದೆಡೆ ನೆರವಾಗಿದೆ ಎನ್ನಬಹುದು.
ಯಾಕೆಂದರೆ ಇಂದು ಪ್ರಧಾನಿ ಮೋದಿ ಪದವಿಯನ್ನು ಅಣಕಿಸಿದ್ದ ಪ್ರಕರಣದಲ್ಲಿ ವಿಚಾರಣೆ ಇತ್ತು. ಆದ್ರೆ ಕೋರ್ಟ್ ಅರವಿಂದ್ ಕೇಜ್ರಿವಾಲ್ ಹಾಗೂ ರಾಜ್ಯ ಸಭಾ ಸದಸ್ಯ ಸಂಜಯ್ ಸಿಂಗ್ಗೆವಿನಾಯಿತಿ ನೀಡಿದೆ. ಅಹಮ್ಮದಾಬಾದ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆಗೆ ಹಾಜರಾತಿ ದಿನಾಂಕವನ್ನು ಜುಲೈ 26ಕ್ಕೆ ಮುಂದೂಡಿದೆ.
ದೆಹಲಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಪ್ರವಾಹ ಪರಿಸ್ಥಿತಿಯಿಂದ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಸಂಜಯ್ ಸಿಂಗ್ ತುರ್ತು ಸಭೆ ಹಾಗೂ ಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ತೊಡಗಿದ್ದಾರೆ. ದೆಹಲಿಯ ಜನಜೀವನ ಅಸ್ತವ್ಯಸ್ತವಾಗಿದೆ. ಮನೆಗಳು ಜಲಾವೃತಗೊಂಡಿದೆ. ಜನರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ದೆಹಲಿಯಲ್ಲಿ ತುರ್ತು ಅಗತ್ಯದ ಕಾರಣದ ಅರವಿಂದ್ ಕೇಜ್ರಿವಾಲ್ ಹಾಗೂ ಸಂಜಯ್ ಸಿಂಗ್ಗೆ ಕೋರ್ಟ್ ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎಂದು ವಕೀಲರು ವಾದಿಸಿದ್ದಾರೆ. ದೆಹಲಿ ಪರಿಸ್ಥಿತಿ ಕಾರಣದಿಂದ ಕೋರ್ಟ್, ದಿನಾಂಕ ಮುಂದೂಡಿತು. ಜುಲೈ 26ಕ್ಕೆ ಹಾಜರಾಗಲು ಸೂಚನೆ ನೀಡಿದೆ.