ಹೊಸದಿಗಂತ ವರದಿ ಹಾವೇರಿ:
ದೆಹಲಿಯಲ್ಲಿ ಆದಂತಹ ಬಾಂಬ್ ಸ್ಫೋಟ ಘಟನೆಯ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿಯು ಸಹ ಕಟ್ಟೆಚ್ಚರ ವಹಿಸಲಾಗಿದೆ.

ಪ್ರಮುಖವಾಗಿ ಜನ ನಿಬೀಡ ಪ್ರದೇಶಗಳಾದ ಮಾರ್ಕೆಟ್, ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್ ಹಾಗೂ ಇತರೆ ಪ್ರಮುಖ ಸ್ಥಳಗಳಲ್ಲಿ ಸೆಕ್ಯೂರಿಟಿ ಚೆಕ್ಕಿಂಗ್ ಪ್ರಕ್ರಿಯೆ ನಡೆದಿದೆ. ಅಲ್ಲದೇ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ತಮ್ಮ ತಮ್ಮ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾವಹಿಸಿ ಗಸ್ತು ಹಾಗೂ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಲಾಗಿದೆ.

ಹಾವೇರಿ ಹಾಗೂ ರಾಣೆಬೆನ್ನೂರ ನಗರದ ರೈಲು ನಿಲ್ದಾಣಗಳಲ್ಲಿ ಪೊಲೀಸರು ಹೆಚ್ಚಿನ ನಿಗಾವಹಿಸಿ ಗಸ್ತು ಹಾಗೂ ಬಂದೋಬಸ್ತ್ ವ್ಯವಸ್ಥೆ ಪರಿಶೀಲನೆ ನಡೆಸಿದರು.

