ದೆಹಲಿ ಹನುಮ ಜಯಂತಿ ಶೋಭಾಯಾತ್ರೆ ವೇಳೆ ಹಿಂಸಾಚಾರ ನಡೆಸಿದ ಪ್ರಮುಖ ಆರೋಪಿ ಸೆರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ದೆಹಲಿಯ ಜಹಾಂಗಿಪುರಿ ಪ್ರದೇಶದಲ್ಲಿ ಹನುಮ ಜಯಂತಿಯಂದು ಕೋಮುಗಲಭೆ ಸೃಷ್ಟಿಸಿದ್ದ ಪ್ರಮುಖ ಆರೋಪಿಯನ್ನು ದೆಹಲಿ ಪೊಲೀಸರು ಪಶ್ಚಿಮ ಬಂಗಾಳದಲ್ಲಿ ವಶಕ್ಕೆ ಪಡೆದಿದ್ದಾರೆ.
ಫರೀದ್ ಅಲಿಯಾಸ್ ನೀತು ಬಂಧಿತ ಆರೋಪಿ. ಕೋಮುಗಲಭೆಯಲ್ಲಿ ಭಾಗಿಯಾಗಿದ್ದ ಫರೀದ್‌ ಬಳಿಕ ಪಶ್ಚಿಮ ಬಂಗಾಳದ ಮಿಡ್ನಾಪುರದ ತಮ್ಲುಕ್‌ ಗ್ರಾಮಕ್ಕೆ ಪರಾರಿಯಾಗಿ ಚಿಕ್ಕಮ್ಮನ ಮನೆಯಲ್ಲಿ ಅಡಗಿಕೊಂಡಿದ್ದ. ಅಪರಾಧ ವಿಭಾಗದ ಪೊಲೀಸರು ಆರೋಪಿಯ ಮೊಬೈಲ್‌ ಲೊಕೇಶನ್‌ ಆಧರಿಸಿ ಪತ್ತೆ ಹಚ್ಚಿದ್ದಾರೆ.
ಫರೀದ್ ಸ್ಥಳೀಯ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದ. ಕಳ್ಳತನ, ಸರಗಳ್ಳತನ ಮತ್ತು ಮನೆಗಳ್ಳತನ ಸೇರಿದಂತೆ ಆತನ ವಿರುದ್ಧ ಆರು ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಏಪ್ರಿಲ್ 16 ರಂದು ರಾಷ್ಟ್ರ ರಾಜಧಾನಿಯ ಜಹಾಂಗೀರ್‌ಪುರಿಯಲ್ಲಿ ಹನುಮಾನ್ ಜಯಂತಿ ಮೆರವಣಿಗೆ ವೇಳೆ ದುಷ್ಕರ್ಮಿಗಳು ಗಲಭೆ ಸೃಷ್ಠಿಸಿದ್ದರು. ಘರ್ಷಣೆಯ ಸಮಯದಲ್ಲಿ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಲಾಗಿತ್ತು. ಘಟನೆಯಲ್ಲಿ ಎಂಟು ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕರು ಗಾಯಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!