ಹೊಸದಿಗಂತ ಡಿಜಿಟಲ್ ಡೆಸ್ಕ್:
2020ರ ದೆಹಲಿ ಗಲಭೆ ಪಿತೂರಿ ಪ್ರಕರಣದ ಆರೋಪಿ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಹಳೆ ವಿದ್ಯಾರ್ಥಿ ಉಮರ್ ಖಾಲಿದ್ (Umar Khalid) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ.
ಕರ್ಕರ್ದೂಮಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜಪೇಯಿ ಅವರು ಖಾಲಿದ್ ಅವರ ಮನವಿಯನ್ನು ತಿರಸ್ಕರಿಸಿದರು.
ಫೆಬ್ರವರಿ 14ರಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಿಂತೆಗೆದುಕೊಂಡ ನಂತರ ಖಾಲಿದ್ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಿದ್ದರು.
ಸನ್ನಿವೇಶಗಳ ಬದಲಾವಣೆಯಿಂದಾಗಿ ಅರ್ಜಿಯನ್ನು ವಾಪಸ್ ಪಡೆದುಕೊಳ್ಳಲಾಗುತ್ತಿದೆ ಹಾಗೂ ತನ್ನ ಕಕ್ಷಿಗಾರ ವಿಚಾರಣಾ ನ್ಯಾಯಾಲಯದಿಂದ ಮತ್ತೆ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸುತ್ತಾರೆ” ಎಂದು ಅಂದು ಕಪಿಲ್ ಸಿಬಲ್ ಹೇಳಿದ್ದರು. ಜತೆಗೆ ಖಾಲಿದ್ ವಿರುದ್ಧ ಹೇರಲಾದ ಯುಎಪಿಎ (Unlawful Activities Prevention Act-UAPA)ಯ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಮುಂದುವರಿಸುವುದಾಗಿ ತಿಳಿಸಿದ್ದರು.
ಏನಿದು ಪ್ರಕರಣ?
2020ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ ಪಿತೂರಿಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಖಾಲಿದ್‌ನಲ್ಲಿ ಬಂಧಿಸಲಾಗಿತ್ತು.