ದೆಹಲಿ: ಬುರಾರಿ ಬಳಿ ಸ್ಕೂಟರ್ ಡಿವೈಡರ್ ಡಿಕ್ಕಿ, ಚಾಲಕ ಸಾವು, ಇಬ್ಬರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಂಗಳವಾರ ಬೆಳಗ್ಗೆ ಬುರಾರಿ ಮೇಲ್ಸೇತುವೆ ಬಳಿ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ದೊಡ್ಡ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪಘಾತಕ್ಕೊಳಗಾದ ಮೂವರು ಜಹಾಂಗೀರ್‌ಪುರಿ ನಿವಾಸಿಗಳಾಗಿದ್ದು, ಜಾಮಾ ಮಸೀದಿಗೆ ತೆರಳುವ ವೇಳೆ ಈ ದುರ್ಘಟನೆ ನಡೆದಿದೆ ಎಂದು ಉತ್ತರ ವಿಭಾಗದ ಡಿಸಿಪಿ ಸಾಗರ್ ಸಿಂಗ್ ಕಲ್ಸಿ ತಿಳಿಸಿದ್ದಾರೆ.

ಸ್ಕೂಟರ್ ಚಾಲನೆ ಮಾಡುತ್ತಿದ್ದ ಮೃತರಿಗೆ 14 ವರ್ಷ, ಗಾಯಗೊಂಡ ಸವಾರರು 8 ಮತ್ತು 17 ವರ್ಷ ವಯಸ್ಸಿನವರಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಜೀರಾಬಾದ್ ಪೊಲೀಸ್ ಠಾಣೆಯಲ್ಲಿಐಪಿಸಿ ಸೆಕ್ಷನ್ 279, 337 ಮತ್ತು 304(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!