ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆಯನ್ನು ಗುರುವಾರ ಧ್ವನಿ ಮತದಿಂದ ಅಂಗೀಕರಿಸಲಾಗಿದೆ.
ಮತದಾನದ ವೇಳೆ ವಿರೋಧ ಪಕ್ಷದ ಸಂಸದರು ಸದನದಿಂದ ಹೊರ ನಡೆದರು.
ಮತದಾನದ ವೇಳೆ ಸ್ಪೀಕರ್ ಓಂ ಬಿರ್ಲಾ ಮಾತನಾಡುತ್ತಿದ್ದಾಗ, ಆಮ್ ಆದ್ಮಿ ಪಾರ್ಟಿಯ ಸಂಸದ ಸುಶೀಲ್ ಕುಮಾರ್ ರಿಂಕು ಆಡಳಿತ ಪಕ್ಷದ ಸಂಸದರ ಮೇಲೆ ಪೇಪರ್ ಹರಿದು ಎಸೆದಿದ್ದಾರೆ. ಇದಕ್ಕಾಗಿ ಸುಶೀಲ್ ಕುಮಾರ್ ರಿಂಕು ಅವರನ್ನು ಇಡೀ ಅಧಿವೇಶನಕ್ಕೆ ಅಮಾನತುಗೊಳಿಸಲಾಗಿದೆ. ಮಸೂದೆ ಅಂಗೀಕಾರವಾದ ಬಳಿಕ ಲೋಕಸಭೆಯನ್ನು ನಾಳೆಗೆ ಮುಂದೂಡಲಾಗಿದೆ.