ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಬೀದಿನಾಯಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ಆದೇಶ ಭಾರೀ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಮುಖ್ಯ ನ್ಯಾ. ಗವಾಯಿ ಅವರು ಎಲ್ಲಾ ಅರ್ಜಿಗಳ ವಿಚಾರಣೆಗೆ ಮೂವರು ನ್ಯಾಯಾಧೀಶರ ಹೊಸ ಪೀಠವನ್ನು ರಚಿಸಿದ್ದಾರೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನು ಒಳಗೊಂಡ ಮೂವರು ನ್ಯಾಯಾಧೀಶರು ದೆಹಲಿ ಬೀದಿನಾಯಿಗಳಿಗೆ ಸಂಬಂಧಿಸಿದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ. ಹೊಸ ಪೀಠ ಗುರುವಾರ ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಲಿದೆ.