ಡೆಲ್ಲಿ ತಂಡವನ್ನುಕಾಡುತ್ತಿದೆ ಕೊರೋನಾ: ಕೋಚ್‌ ಪಾಂಟಿಂಗ್‌ಗೆ 5 ದಿನಗಳ ಕ್ವಾರಂಟೈನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಐಪಿಎಲ್ ಅಂಗಳಕ್ಕೆ ಈಗಾಗಲೇ ಕೊರೋನಾ ಲಗ್ಗೆ ಇಟ್ಟಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ರಿಕಿ ಪಾಂಟಿಂಗ್ ಕುಟುಂಬದ ಸದಸ್ಯರೊಬ್ಬರಿಗೆ ಕೋವಿಡ್ ದೃಢಪಟ್ಟಿದೆ. ಈ ಹಿನ್ನೆಲೆ ಐದು ದಿನಗಳ ಕ್ವಾರಂಟೈನ್‌ಗೆ ಒಳಗಾಗಲಿದ್ದಾರೆ.
ಐಪಿಎಲ್ 2022ನೇ ಟೂರ್ನಿಯಲ್ಲಿ ಇಂದು (ಶುಕ್ರವಾರ) ರಾಜಸ್ಥಾನ್ ರಾಯಲ್ಸ್ ವಿರುದ್ಧದ ಹಣಾಹಣಿಗೂ ಮುನ್ನ ಈ ಮಹತ್ವದ ಬೆಳವಣಿಗೆ ನಡೆದಿದೆ. ಆದರೆ ಪಾಂಟಿಂಗ್ ಅವರಿಗೆ ಎರಡು ಬಾರಿ ನಡೆಸಲಾದ ಕೋವಿಡ್ ಪರೀಕ್ಷಾ ವರದಿಯು ನೆಗೆಟಿವ್ ಬಂದಿದೆ.
ಕುಟುಂಬದ ಸದಸ್ಯರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಪಾಂಟಿಂಗ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಪಾಳಯದಲ್ಲಿ ಇದುವರೆಗೆ ಆರು ಕೋವಿಡ್ ಪ್ರಕರಣಗಳು ಕಾಣಿಸಿಕೊಂಡಿವೆ.
ಡೆಲ್ಲಿ ತಂಡದ ಆಟಗಾರ ಮಿಚೆಲ್ ಮಾರ್ಷ್, ಫಿಸಿಯೊ ಪ್ಯಾಟ್ರಿಕ್ ಫರ್ಹಾಟ್, ಮಸಾಜ್ ತಜ್ಞ ಚೇತನ್ ಕುಮಾರ್, ವೈದ್ಯ ಅಭಿಜಿತ್ ಸಾಳ್ವಿ ಮತ್ತು ಸಾಮಾಜಿಕ ಜಾಲತಾಣ ನಿರ್ವಾಹಕ ತಂಡದ ಸದಸ್ಯ ಆಕಾಶ್ ಮಾನೆ ಅವರು ಸೋಂಕಿತರಾಗಿದ್ದು, ಪ್ರತ್ಯೇಕವಾಸದಲ್ಲಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!