ದೆಹಲಿ ವಿಶ್ವವಿದ್ಯಾಲಯ: ವಿದ್ಯಾರ್ಥಿ ಚುನಾವಣೆಯಲ್ಲಿ ಎಬಿವಿಪಿ ಗೆ ಗೆಲುವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಚುನಾವಣೆಯಲ್ಲಿ ಎಬಿವಿಪಿ ಗೆಲುವು ಸಾಧಿಸಿದೆ. 4 ಸ್ಥಾನಗಳ ಪೈಕಿ 3 ಸ್ಥಾನ ಎಬಿವಿಪಿ ತನ್ನದಾಗಿಸಿಕೊಂಡಿದ್ದು,ಈ ಮೂಲಕ ಅಧ್ಯಕ್ಷ ಚುಕ್ಕಾಣಿ ಹಿಡಿದಿದೆ. ಇನ್ನು ಎನ್‌ಎಸ್‌ಯುಐ ಉಪಾಧ್ಯಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಎಬಿವಿಪಿ ನಾಯಕ ತುಷಾರ್ ದೇಧಾ ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಘಟಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೆ, ಕಾರ್ಯದರ್ಶಿಯಾಗಿ ಅಪರಾಜಿತ ಹಾಗೂ ಸಚಿನ್ ಬೈಸ್ಲಾ ಸಹ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ವಿದ್ಯಾರ್ಥಿಸಂಘದ(ಎನ್‌ಎಸ್‌ಯುಐ) ಅಭಿ ದಹಿಯಾ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಗೆದ್ದಿದ್ದಾರೆ.

2019ರ ಬಳಿಕ ದೆಹಲಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆದಿಲ್ಲ. ಮೂರು ವರ್ಷಗಳ ಬಳಿಕ ನಡೆದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್( ಎಬಿವಿಪಿ) ಜಯಭೇರಿ ಬಾರಿಸುವಲ್ಲಿ ಯಶಸ್ವಿಯಾಗಿದೆ.

ಒಟ್ಟು 24 ವಿದ್ಯಾರ್ಥಿ ನಾಯಕರು ಚನಾವಣೆಯಲ್ಲಿ ಸ್ಪರ್ಧಿಸಿದ್ದರು. 52 ವಿವಿಧ ಕಾಲೇಜುಗಳ ಈ ಚುನಾವಣೆಯಲ್ಲಿ ಪಾಲ್ಗೊಂಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!