ಡೆಲ್ಲಿಗೆ ಇಂದು ಹೈದರಾಬಾದ್ ಎದುರಾಳಿ: ಟಾಸ್ ಗೆದ್ದ ಪಂತ್ ಬೌಲಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಐಪಿಎಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಡೆಲ್ಲಿ ನಾಯಕ ರಿಷಭ್ ಪಂತ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಸುಮಿತ್ ಬದಲಿಗೆ ಲಲಿತ್ ಯಾದವ್ ಹಾಗೂ ಇಶಾಂತ್ ಶರ್ಮಾ ಬದಲಿಗೆ ಏನ್ರಿಚ್ ನೋಕಿಯ ಆಡುವ ಹನ್ನೊಂದರ ಬಳಗ ಕೂಡಿಕೊಂಡಿದ್ದಾರೆ. ಇನ್ನೊಂದೆಡೆ ಸನ್‌ರೈಸರ್ಸ್ ಹೈದರಾಬಾದ್‌ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಪ್ಯಾಟ್ ಕಮಿನ್ಸ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್‌ ಆಡಿರುವ 6ರಲ್ಲಿ 4 ಪಂದ್ಯ ಗೆದ್ದಿದ್ದು, ಇನ್ನೊಂದೆಡೆ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ 7 ಪಂದ್ಯಗಲ್ಲಿ 3ರಲ್ಲಿ ಗೆದ್ದಿದ್ದು, ಪ್ಲೇ-ಆಫ್‌ ಹಾದಿ ಸುಗಮಗೊಳ್ಳಬೇಕಿದ್ದರೆ ಈ ಪಂದ್ಯದಲ್ಲಿ ಗೆಲುವು ಅಗತ್ಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!