January17, 2026
Saturday, January 17, 2026
spot_img

ಡೆಲ್ಲಿ vs ಆರ್​ಸಿಬಿ: ಟಾಸ್ ಗೆದ್ದ ಮಂಧಾನ ಪಡೆ ಫೀಲ್ಡಿಂಗ್ ಆಯ್ಕೆ! ಅಂತಿಮ ಪಂದ್ಯದಲ್ಲಿ ಗೆಲುವು ಯಾರಿಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಆವೃತ್ತಿಯ ಅಂತಿಮ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಲೀಗ್‌ನ ಬಲಿಷ್ಠ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿವೆ.

ಟಾಸ್ ಗೆದ್ದ ಆರ್​ಸಿಬಿ ನಾಯಕಿ ಸ್ಮೃತಿ ಮಂಧಾನ ಮೊದಲು ಬೌಲಿಂಗ್ ಮಾಡುವ ತೀರ್ಮಾನ ಕೈಗೊಂಡಿದ್ದಾರೆ. ಸಂಜೆ ವೇಳೆ ಮೈದಾನದಲ್ಲಿ ಇಬ್ಬನಿ ಪ್ರಮುಖ ಪಾತ್ರ ವಹಿಸುವುದರಿಂದ, ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವುದು ಸುಲಭವಾಗಲಿದೆ ಎಂಬ ಲೆಕ್ಕಾಚಾರ ಸ್ಮೃತಿ ಅವರದ್ದು. ಹೀಗಾಗಿ ಜೆಮಿಮಾ ನೇತೃತ್ವದ ಡೆಲ್ಲಿ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಆಡಿದ ಮೂರು ಪಂದ್ಯಗಳಲ್ಲೂ ಜಯಭೇರಿ ಬಾರಿಸಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇಂದಿನ ಪಂದ್ಯಕ್ಕಾಗಿ ತಂಡದಲ್ಲಿ 3 ಪ್ರಮುಖ ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ.

ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಸೋತು ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಗೌರವದ ಗೆಲುವಿಗಾಗಿ ಡೆಲ್ಲಿ ಇಂದು ಹೋರಾಡಬೇಕಿದೆ.

ಉಭಯ ತಂಡಗಳ ‘ಪ್ಲೇಯಿಂಗ್ XI’

ರಾಯಲ್ ಚಾಲೆಂಜರ್ಸ್ ಬೆಂಗಳೂರು
ಸ್ಮೃತಿ ಮಂಧಾನ (ನಾಯಕಿ), ಗ್ರೇಸ್ ಹ್ಯಾರಿಸ್, ಜಾರ್ಜಿಯಾ ವೋಲ್, ರಿಚಾ ಘೋಷ್ (ವಿಕೆಟ್ ಕೀಪರ್), ಗೌತಮಿ ನಾಯ್ಕ್, ನಡಿನ್ ಡಿ ಕ್ಲರ್ಕ್, ರಾಧಾ ಯಾದವ್, ಪ್ರೇಮಾ ರಾವತ್, ಶ್ರೇಯಾಂಕ ಪಾಟೀಲ್, ಸಯಾಲಿ ಸತ್ಘರೆ, ಲಾರೆನ್ ಬೆಲ್.

ಡೆಲ್ಲಿ ಕ್ಯಾಪಿಟಲ್ಸ್
ಶಫಾಲಿ ವರ್ಮಾ, ಲಿಜೆಲ್ಲೆ ಲೀ (ವಿಕೆಟ್ ಕೀಪರ್), ಲಾರಾ ವೊಲ್ವಾರ್ಡ್ಟ್, ಜೆಮಿಮಾ ರೋಡ್ರಿಗಸ್ (ನಾಯಕಿ), ಮರಿಝನ್ನೆ ಕಪ್, ಸ್ನೇಹ ರಾಣಾ, ನಿಕಿ ಪ್ರಸಾದ್, ಮಿನ್ನು ಮಣಿ, ಶ್ರೀ ಚರಣಿ, ನಂದಿನಿ ಶರ್ಮಾ, ಲೂಸಿ ಹ್ಯಾಮಿಲ್ಟನ್.

Must Read

error: Content is protected !!