ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಮಹಿಳೆಯೊಬ್ಬರು ಕೆನ್ನೆಗೆ ಹೊಡೆದಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಕೆಯ ವರ್ತನೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
@gharkekalesh ಎಂಬ ಟ್ವಿಟ್ಟರ್ ಬಳಕೆದಾರ ಶೇರ್ ಮಾಡಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರು ಪೊಲೀಸರ ವಿರುದ್ಧ ಆಕ್ರಮಣಕಾರಿಯಾಗಿ ವರ್ತಿಸುತ್ತಿರುವುದನ್ನು ತೋರಿಸಲಾಗಿದೆ. ಆತನೊಂದಿಗೆ ತೀವ್ರ ವಾಗ್ವಾದಕ್ಕಿಳಿದು ಮನಬಂದಂತೆ ಥಳಿಸಿದ್ದಾರೆ. ಘರ್ಷಣೆಗೆ ಸರಿಯಾದ ಕಾರಣ ತಿಳಿದುಬಂದಿಲ್ಲ ಆದರೆ ಆಕೆಯ ವರ್ತನೆಯು ನೋಡುಗರನ್ನು ಸಹ ಚಿಂತೆಗೀಡು ಮಾಡಿದೆ. ಕೆಲವರು ಮಧ್ಯ ಪ್ರವೇಶಿಸಿ ಸಮಾಧಾನಪಡಿಸಲು ಯತ್ನಿಸಿದರೂ ಆಕೆ ತನ್ನ ವರ್ತನೆಯನ್ನು ನಿಲ್ಲಿಸಲಿಲ್ಲ.
ಆಕೆಯ ವರ್ತನೆ ವಿಪರೀತವಾಗಿದ್ದು, ಜಾಮೀನು ನೀಡದೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ. ಆದರೆ ಹೋರಾಟದ ಸಂಪೂರ್ಣ ತಿಳುವಳಿಕೆ ಇಲ್ಲದೆ ಮಹಿಳೆಯ ಮೇಲೆ ಆರೋಪ ಹೊರಿಸಬಾರದು ಎಂಬ ಮಾತುಗಳೂ ಕೇಳಿ ಬರುತ್ತಿವೆ. ಮಹಿಳೆಯನ್ನು ಪ್ರಚೋದಿಸುವ ಹಿಂದೆ ಪೊಲೀಸ್ ಅಧಿಕಾರಿಯ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂಬುದು ಹಲವರ ಅಭಿಪ್ರಾಯ.