ದೆಹಲಿಯ ಶಿಕ್ಷಣ ವ್ಯವಸ್ಥೆ ‘ಶಿಕ್ಷಣ ಮಾಫಿಯಾ’ಗೆ ಹಸ್ತಾಂತರ: ಮನೀಶ್‌ ಸಿಸೋಡಿಯಾ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಶಿಕ್ಷಣ ವ್ಯವಸ್ಥೆಯನ್ನು ಬಿಜೆಪಿ ಸರ್ಕಾರ ಶಿಕ್ಷಣ ಮಾಫಿಯಾಗೆ ಹಸ್ತಾಂತರಿಸಿದೆ ಎಂದು ಎಎಪಿ ನಾಯಕ, ಮಾಜಿ ಶಿಕ್ಷಣ ಸಚಿವ ಮನೀಶ್‌ ಸಿಸೋಡಿಯಾ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜನರು ತೀರಾ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಜೌಷಧಗಳು ಲಭ್ಯವಿಲ್ಲ. ಈಗ ಖಾಸಗಿ ಶಾಲೆಗಳು ಶುಲ್ಕವನ್ನು ಹೆಚ್ಚಿಸುವ ಮೂಲಕ ಪೋಷಕರನ್ನು ಲೂಟಿ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಹಲವಾರು ಖಾಸಗಿ ಶಾಲೆಗಳು ಶುಲ್ಕವನ್ನು ಶೇ 20 ರಿಂದ ಶೇ 82ರಷ್ಟು ಹೆಚ್ಚಿಸಿವೆ. ಇದರಿಂದಾಗಿ ಪೋಷಕರು ಚಿಂತಿತರಾಗಿದ್ದಾರೆ. ಶುಲ್ಕವನ್ನು ಪೋಷಕರು ಪಾವತಿಸದಿದ್ದರೆ, ಮಕ್ಕಳಿಗೆ ತರಗತಿಗಳನ್ನು ನಿರಾಕರಿಸಲಾಗುತ್ತಿದೆ. ಆದರೂ, ಬಿಜೆಪಿ ಸರ್ಕಾರ ಮೂಕ ಪ್ರೇಕ್ಷಕನಂತೆ ವರ್ತಿಸುತ್ತಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!