ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನವನ್ನು ರೋಸ್ ಅವೆನ್ಯೂ ನ್ಯಾಯಾಲಯ ಜೂನ್ 2ರವರೆಗೆ ವಿಸ್ತರಿಸಿದೆ.
ಇಡಿ ತನಿಖೆ ನಡೆಸುತ್ತಿರುವ ಅಬಕಾರಿ ಪ್ರಕರಣದಲ್ಲಿ ಎಎಪಿ ನಾಯಕ ಮತ್ತು ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಇಂದು ಕೊನೆಯ ದಿನವಾದ್ದರಿಂದ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಕರೆತರಲಾಯಿತು.
ನ್ಯಾಯಾಲಯದಲ್ಲಿ ಸಿಸೋಡಿಯಾಗೆ ಮತ್ತೊಮ್ಮೆ ಹಿನ್ನೆಡೆಯಾಗಿದ್ದು, ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಜೂನ್ 2ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.
Delhi's Rouse Avenue Court extends former Delhi Deputy CM Manish Sisodia's judicial custody till June 2 in the CBI case. Consideration of the charge sheet pending before the court. https://t.co/CafCuSCAd7
— ANI (@ANI) May 12, 2023