ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸಿ: ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಂಗಳೂರಿನಲ್ಲಿ ಐತಿಹಾಸಿಕ ಕಾರ್ಯಕ್ರಮ ಮುಗಿಸಿದ ಬಳಿಕ ಪ್ರಧಾನಿ ಮೋದಿ ಎನ್​​ಎಂಪಿಎ ಹೆಲಿಪ್ಯಾಡ್​ನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದರು.

ಸಭೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಧಾನಿ ಮೋದಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸಲು ತಿಳಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲೂ ತಿಳಿಸಿದ್ದು, ಯೋಜನೆಗಳು ಪ್ರತಿಯೊಬ್ಬ ಫಲಾನುಭವಿಗೆ ಸಿಗಬೇಕು. ಸರ್ಕಾರದ ಅಂಕಿಅಂಶ ಆಗಿರದೇ ನಿಜವಾದ ಫಲಾನುಭವಿಗಳಿಗೆ ತಲುಪಲು ಪ್ರಯತ್ನಿಸಿ ಎಂದು ತಿಳಿಸಿದ್ದಾರೆ ಎಂದರು.

ವಿಧಾನಸಭಾ ಚುನಾವಣೆಗೆ ಈಗಾಗಲೇ ತಯಾರಿ ನಡೆಸಿದ್ದು, ರಾಜ್ಯದ ಏಳು ಕಡೆ ದೊಡ್ಡ ಸಮಾವೇಶ ಮಾಡಲು ಪಕ್ಷ ನಿರ್ಧರಿಸಿದೆ ಎಂದು ತಿಳಿಸಿದರು.

ಮಂಗಳೂರಿನ ಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಬಿಜೆಪಿ ನಾಯಕರೊಂದಿಗೆ ಕೋರ್ ಕಮಿಟಿ ಸಭೆ ನಡೆಸಿದರು. ಬಳಿಕ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನ ಮೂಲಕ ಅವರು ನವದೆಹಲಿಗೆ ತೆರಳಿದರು.

ಈಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಮುಖಂಡ ಸಿ.ಟಿ ರವಿ ಸಭೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!