October 11, 2026
Sunday, October 11, 2026
spot_img

ನಡೆದುಕೊಂಡು ಹೋಗ್ತಿದ್ದ ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೊಟ್ಟ ಡೆಲಿವರಿ ಬಾಯ್ಸ್‌ ಅಂದರ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿ ಬಚಾವ್‌ ಆದ್ವಿ ಅನ್ಕೊಂಡು ಹೋಗಿದ್ದ ಡೆಲಿವರಿ ಬಾಯ್ಸ್‌ ಇದೀಗ ಅರೆಸ್ಟ್‌ ಆಗಿದ್ದಾರೆ.

ಮಾರುತಿನಗರದ ಕೋಗಿಲು ಮುಖ್ಯರಸ್ತೆಯಲ್ಲಿ ಇಬ್ಬರು ಡೆಲಿವರಿ ಬಾಯ್ಸ್‌ ಬೈಕ್‌ನಲ್ಲಿ ಹೋಗ್ತಿದ್ದರು. ಈ ವೇಳೆ ನಡೆದುಕೊಂಡು ಹೋಗ್ತಿದ್ದ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿದ್ದಲ್ಲದೇ ಖಾಸಗಿ ಅಂಗಗಳನ್ನು ಸ್ಪರ್ಶಿಸಿ ಕಿರುಕುಳ ನೀಡಿದ್ದರು.

ಆರೋಪಿಗಳಾದ ಹರೀಶ್‌ ಹಾಗೂ ಪ್ರಜ್ವಲ್‌ ತುಮಕೂರು ಮೂಲದವರು. ಅವರು ಎಸ್‌ಎಸ್‌ಎಲ್‌ಸಿಯಲ್ಲಿ ಫೇಲಾಗಿ ಬೆಂಗಳೂರಿಗೆ ಕೆಲಸಕ್ಕೆ ಬಂದವರು ಎಂದು ತಿಳಿದುಬಂದಿದೆ.

ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ ಏನೂ ಆಗದವರಂತೆ ಹೋಗಬಹುದು ಎಂದು ಇವರು ತಿಳಿದುಕೊಂಡಿದ್ದರು. ಆದರೆ ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದ್ದು, ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೋ ಪೋಸ್ಟ್‌ ಮಾಡಲಾಗಿತ್ತು. ಇದನ್ನು ಗಮನಿಸಿ ಪೊಲೀಸರು ಆರೋಪಿಗಳನ್ನು ಪತ್ತೆ ಮಾಡಿದ್ದಾರೆ.

Must Read