spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರಿಂದ ಆಂಬುಲೆನ್ಸ್ ವಿತರಣೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಮಂಡ್ಯ:

ತಾಲೂಕಿನ ಹನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಎಂ.ಶ್ರೀನಿವಾಸ್ ಅವರು ಶಾಸಕರ ಅನುದಾನ 19 ಲಕ್ಷ ರೂ ವೆಚ್ಚದಲ್ಲಿ ಕಸಬಾ ಹೋಬಳಿಯ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅನುಕೂಲವಾಗಲೆಂದು ಸುಸಜ್ಜಿತವಾದ ಆಂಬುಲೆನ್ಸ್ ವಿತರಿಸಿದರು.
ನಂತರ ಮಾತನಾಡಿದ ಅವರು ಮಂಡ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮೂರು ಹೋಬಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರ ಅನುದಾನದಲ್ಲಿ ಆಂಬುಲೆನ್ಸ್ ಕೊಡುಗೆ ಕೊಡಲು ನಿರ್ಧರಿಸಲಾಗಿದೆ. ಈಗಾಗಲೇ ಬಸರಾಳು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಇರುವುದರಿಂದ ಶೀಘ್ರದಲ್ಲೇ ಕೆರಗೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ವಿತರಣೆ ಮಾಡಲಾಗುವುದು ಎಂದರು.
ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಶಾಸಕರ ಹುಟ್ಟೂರು ಹನಕೆರೆ ಗ್ರಾಮದಲ್ಲಿ ಕೊರೋನಾ ರೋಗಿಗಳ ಸಂಖ್ಯೆ ಹೆಚ್ಚದಾಗ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ಇಲ್ಲದಿರುವುದನ್ನು ಮನಗಂಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ಕೊಡಲು ನಿರ್ಧಾರಕ್ಕೆ ಬಂದೆ ಎಂದ ಅವರು ಸಾರ್ವಜನಿಕರು ಕಾಯಿಲೆ ಬಂದ ಸಂದರ್ಭದಲ್ಲಿ ಆರೋಗ್ಯ ಭಾಗ್ಯ ತಲುಪಿಸಲು ಉಪಯೋಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಧನಂಜಯ ಅವರು ಕಾರ್ಯನ್ಮು ಖವಾಗಿ ಶರವೇಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೇ ಅನುಕರಣೆ ಅನುಸರಿಸಲಿ ಎಂದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss