ಲಂಚವಾಗಿ 5 ಕೆಜಿ ಆಲುಗಡ್ಡೆಗೆ ಬೇಡಿಕೆ: ಸಬ್‌ ಇನ್ಸ್‌ಪೆಕ್ಟರ್ ಸಸ್ಪೆಂಡ್

ಹೊಸದಿಗಂತ ಡಿಜಿಟಲ್ ಡೆಸ್ಕ್;

ರೈತರೊಬ್ಬರಿಂದ ಲಂಚವಾಗಿ 5 ಕೆಜಿ ಆಲುಗಡ್ಡೆಗೆ ಬೇಡಿಕೆಯಿಟ್ಟಿದ್ದ ಸಬ್‌ಇನ್‌ಸ್ಪೆಕ್ಟರ್‌ ಒಬ್ಬರನ್ನು ಅಮಾನತುಗೊಳಿಸಿರುವ ಘಟನೆ ಉತ್ತರ ಪ್ರದೇಶದ ಕನೌಜ್‌ನಲ್ಲಿ ನಡೆದಿದೆ.

ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಪೊಲೀಸ್ ಅಧಿಕಾರಿ ರಾಮ್ ಕೃಪಾಲ್ ಸಿಂಗ್ ಲಂಚ ಕೇಳಿರುವ ಆರೋಪದ ಆಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಲಂಚಕ್ಕಾಗಿ ‘ಆಲೂಗಡ್ಡೆ’ ಎಂಬ ಪದವನ್ನು ಕೋಡ್‌ ಆಗಿ ಬಳಸಲಾಗಿದೆ ಎಂಬುದು ತನಿಖೆಯಿಂದ ಗೊತ್ತಾಗಿದೆ.

ಸೌರಿಖ್ ಪೊಲೀಸ್ ಠಾಣೆ ವ್ಯಾಪ್ತಿಯ ಭವಲ್‌ಪುರ ಚಾಪುನ್ನಾ ಚೌಕಿಯಲ್ಲಿ ನಿಯೋಜನೆಗೊಂಡಿದ್ದ ಸಬ್‌ಇನ್‌ಸ್ಪೆಕ್ಟರ್‌ನನ್ನು ಅಮಾನತುಗೊಳಿಸಿ ಕನೌಜ್ ಎಸ್‌ಪಿ ಅಮಿತ್ ಕುಮಾರ್ ಆನಂದ್ ಆದೇಶ ಹೊರಡಿಸಿದ್ದಾರೆ.

ವೈರಲ್ ಆಡಿಯೋದಲ್ಲಿ ಆರೋಪಿ ಪೋಲೀಸ್‌, ರೈತರೊಬ್ಬರಿಂದ 5 ಕೆಜಿ ಆಲೂಗಡ್ಡೆಗೆ ಬೇಡಿಕೆ ಇಡುತ್ತಾರೆ. ಈ ಬೇಡಿಕೆಯನ್ನು ಪೂರೈಸಲು ಕಷ್ಟ ಎಂದು ರೈತ ಹೇಳುತ್ತಾರೆ. 5 ಕೆಜಿ ಬದಲಿಗೆ 2 ಕೆಜಿ ನೀಡುತ್ತೇನೆಂದು ರೈತರ ಹೇಳುತ್ತಾರೆ. ಅದಕ್ಕೆ ಪೊಲೀಸ್‌ ಅಧಿಕಾರಿ ಕೋಪಗೊಂಡು, ನಂತರ ಅಂತಿಮವಾಗಿ ಒಪ್ಪಂದವನ್ನು 3 ಕೆಜಿಗೆ ಮಾಡಿಕೊಳ್ಳಲಾಯಿತು.

ಈ ಸಂಬಂಧ ಇಲಾಖಾ ಪ್ರಕ್ರಿಯೆಗಳನ್ನು ಈಗಾಗಲೇ ಪ್ರಾರಂಭಿಸಲಾಗಿದೆ ಎಂದಿದ್ದಾರೆ. ಸದ್ಯ ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ನೆಟ್ಟಿಗರು ವ್ಯಾಪಕ ಚರ್ಚೆ ಆರಂಭಿಸಿದ್ದಾರೆ. 5 ಲಕ್ಷ ರೂ. ಅನ್ನು 5 ಕೆಜಿ ಆಲೂಗಡ್ಡೆಗೆ ಹೋಲಿಸಲಾಗಿದೆ ಎಂದು ಹಲವರು ತಮ್ಮ ಸಂದೇಹ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

LEAVE A REPLY

Please enter your comment!
Please enter your name here

error: Content is protected !!